ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿರುವ ಮತೀಯ ಶಕ್ತಿಗಳ ಸಂಘಟನೆಗಳನ್ನು ಬ್ಯಾನ್ ಮಾಡುವುದಕ್ಕಿಂತಲೂ ಇದಕ್ಕೆ ಬೆಂಬಲವಾಗಿರುವ ಮೂಲ ಶಕ್ತಿಗಳನ್ನು ಬೇರು ಸಹಿತ ಕಿತ್ತು ಹಾಕಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರಯತ್ನಿಸುತ್ತಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ.
ಚೂರಿ ಇರಿತಕ್ಕೆ ಒಳಗಾದ ಪ್ರೇಮ್ ಸಿಂಗ್ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲವು ಗಲಭೆ ಆರೋಪಗಳನ್ನು ಹೊತ್ತಿರುವ ಮತೀಯ ಸಂಘಟನೆಗಳನ್ನು ಬ್ಯಾನ್ ಮಾಡಿದರೆ, ಮತ್ತೆ ಬೇರೆ ಬ್ಯಾನರ್ ಅಡಿಯಲ್ಲಿ ಮತ್ತೆ ತಲೆ ಎತ್ತುತ್ತವೆ. ಹೀಗಾಗಿ, ಇಂತಹವರಿಗೆ ಕುಮ್ಮಕ್ಕು ನೀಡುತ್ತಿರುವ ದುಷ್ಟ ಶಕ್ತಿಗಳನ್ನು ಬೇರು ಸಹಿತ ಕಿತ್ತು ಹಾಕುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು.

ಮತೀಯ ಶಕ್ತಿಗಳ ಕೃತ್ಯದಿಂದ ಅಮಾಯಕರು ಹಾಗೂ ಎಲ್ಲ ಸ್ಥರದ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿದೆ. ಸಂಜೆ ಮೇಲಿನ ವ್ಯಾಪಾರಸ್ಥರು ಹಾಗೂ ಬೀದಿ ಬದಿ ವ್ಯಾಪಾರಿಗಳು ಎಲ್ಲ ಸಿದ್ದತೆ ಮಾಡಿಕೊಂಡಿರುತ್ತಾರೆ. ಹೀಗೆ ಯಾರದ್ದೋ ಸ್ವಾರ್ಥಕ್ಕೆ ಏಕಾಏಕಿ ಇಂತಹ ಕೃತ್ಯಗಳು ನಡೆದರೆ ಇಂತಹ ವ್ಯಾಪಾರಿಗಳ ಗತಿಯೇನು? ಅವರು ಎಷ್ಟು ನಷ್ಟ ಅನುಭವಿಸುತ್ತಾರೆ ಎಂದು ವಿಷಾದ ವ್ಯಕ್ತಪಡಿಸಿದರು.











Discussion about this post