No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Tuesday, March 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸುಧಾರಿತ ಜೈವಿಕ ಇಂಧನಗಳಿಗೆ ಉದಯೋನ್ಮುಖ ಪರಿಸರ ಸ್ನೇಹಿ ವ್ಯವಸ್ಥೆ ಅತ್ಯಗತ್ಯ

ಜೆಎನ್‌ಎನ್‌ಸಿಇಯಲ್ಲಿ ಸುಸ್ಥಿರ ಶಕ್ತಿ ನಾವೀನ್ಯತೆ ಕುರಿತ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಡಾ.ವೈ.ಬಿ. ರಾಮಕೃಷ್ಣ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 4, 2024
in ಶಿವಮೊಗ್ಗ
0
ಸುಧಾರಿತ ಜೈವಿಕ ಇಂಧನಗಳಿಗೆ ಉದಯೋನ್ಮುಖ ಪರಿಸರ ಸ್ನೇಹಿ ವ್ಯವಸ್ಥೆ ಅತ್ಯಗತ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸುಧಾರಿತ ಜೈವಿಕ ಇಂಧನಗಳ ಬಳಕೆಯಿಂದ ಭಾರತದಲ್ಲಿ 2070 ರ ವೇಳೆಗೆ ಶೂನ್ಯ ಇಂಗಾಲ ಹೊರಸೂಸುವಿಕೆಯ ವಾತಾವರಣ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಬಯೋ ಡೀಸೆಲ್ ಕಾರ್ಯ ತಂಡದ ಸದಸ್ಯ ಡಾ.ವೈ.ಬಿ. ರಾಮಕೃಷ್ಣ ಹೇಳಿದರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ JNNCE ಜಿಲ್ಲಾ ಜೈವಿಕ ಇಂಧನ ಸಂಶೋಧನೆ ಮತ್ತು ಪ್ರಾತ್ಯಕ್ಷಿಕೆ ಕೇಂದ್ರ, ಕಾಲೇಜಿನ ರಸಾಯನ ವಿಜ್ಞಾನ ವಿಭಾಗ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ್ದ  ಸುಸ್ಥಿರ ಶಕ್ತಿ ಮತ್ತು ವಸ್ತು ವಿಜ್ಞಾನದಲ್ಲಿ ನಾವೀನ್ಯತೆ ಕುರಿತ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಸುಧಾರಿತ ಜೈವಿಕ ಇಂಧನಗಳಿಗಾಗಿ ಭಾರತದಲ್ಲಿ ಸುಸ್ಥಿರ ಶಕ್ತಿ ಮತ್ತು ಉದಯೋನ್ಮುಖ ಪರಿಸರ ನೀತಿಯುಳ್ಳ ವ್ಯವಸ್ಥೆ ಅತ್ಯವಶ್ಯಕವಾಗಿದೆ. ನಾವೀನ್ಯತೆಯ ಸಹಯೋಗದಲ್ಲಿ ಸುಧಾರಿತ ಜೈವಿಕ ಇಂಧನ ಕುರಿತು ಸಂಶೋಧನಾರ್ಥಿಗಳು ಹೆಚ್ಚು ಕೇಂದ್ರಿಕರಿಸಬೇಕಿದೆ ಎಂದು ಹೇಳಿದರು.

Also read: ಸಹಕಾರಿ ಆಂದೋಲನವನ್ನು ಜನಾಂದೋಲನವನ್ನಾಗಿ ಪರಿವರ್ತಿಸಲು ಮೋದಿ ಸರಕಾರ ಪ್ರಯತ್ನ: ಅಮಿತ್ ಶಾ

ಭಾರತವು ಪ್ರತಿ ವರ್ಷ ಸುಮಾರು ಶತಕೋಟಿ ಟನ್‌ಗಳಷ್ಟು ಕೃಷಿ ಅವಶೇಷಗಳನ್ನು ಉತ್ಪಾದಿಸುತ್ತಿದ್ದು, ಅದರಿಂದ ಎಥೆನಾಲ್, ಜೈವಿಕ ಡೀಸೆಲ್ ಮತ್ತು ಜೈವಿಕ ಅನಿಲವನ್ನು ಉತ್ಪಾದಿಸುವ ಮೂಲಕ ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದೆ. ಪೆಟ್ರೋಲಿಯಂ ಸಚಿವಾಲಯವು ಸುಸ್ಥಿರ ಇಂಧನಗಳನ್ನು ಉತ್ಪಾದಿಸಲು 12 ಮೆಗಾ ವಾಣಿಜ್ಯ ಸ್ಥಾವರಗಳನ್ನು ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ಜೈವಿಕ ಅನಿಲವನ್ನು ಉತ್ಪಾದಿಸಲು ಭಾರತದಾದ್ಯಂತ 5000 ವಾಣಿಜ್ಯ ಸ್ಥಾವರಗಳನ್ನು ಸ್ಥಾಪಿಸಲು ಯೋಜಿಸಿದೆ. ಈ ಮೂಲಕ ಭಾರತವು ಕೃಷಿ ಪ್ರಧಾನ ದೇಶವಾದ ಭಾರತದಲ್ಲಿ ಸುಸ್ಥಿರ ಇಂಧನವನ್ನು ಉತ್ಪಾದಿಸುವ ಮತ್ತು ತೈಲ ಆಮದುಗಳನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೆಚ್ಚಿಸಲಾಗುತ್ತಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಹಿರಿಯ ಅಭಿಯಂತರ ಅನಿಲ್.ಆರ್.ನಾಯಕ್ ಮಾತನಾಡಿ, ಸುಸ್ಥಿರ ಶಕ್ತಿ ಮತ್ತು ವಸ್ತು ವಿಜ್ಞಾನದಲ್ಲಿ ನವೀನ ತಂತ್ರಜ್ಞಾನಗಳ ಕುರಿತು ಹೆಚ್ಚೆಚ್ಚು ಯೋಜನೆಯ ಪ್ರಸ್ತಾವನೆಗಳನ್ನು ಮಂಡಳಿಗೆ ಸಲ್ಲಿಸಲು ಯುವ ಸಂಶೋಧಕರು ಮತ್ತು ವಿದ್ಯಾರ್ಥಿಗಳಿಗೆ ತಿಳಿಸಿದರು.

ಜೆ.ಎನ್.ಎನ್.ಸಿ ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಹಿರಿಯ ಮಾರುಕಟ್ಟೆ ವ್ಯವಸ್ಥಾಪಕ ಡಾ.ದಯಾನಂದ‌ ಜಿ.ಎನ್, ರಾಷ್ಟ್ರೀಯ ಶಿಕ್ಷಣ ‌ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಕಾಲೇಜಿನ ಶೈಕ್ಷಣಿಕ ಡೀನ್ ಡಾ.ಪಿ. ಮಂಜುನಾಥ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ರಸಾಯನ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ಎಂ.ಹೆಚ್.ಮೊಯಿನುದ್ದಿನ್ ಖಾನ್, ಸಹ ಪ್ರಾಧ್ಯಾಪಕ ಡಾ.ಚೇತನ್.ಎಸ್.ಜಿ, ಡಾ.ಸಚಿನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕರಾದ ಬಿಂದು ಪವನ್ ಮತ್ತು ಲುಬನಾ ಅಫರೋಜ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ 110 ಕ್ಕು ಹೆಚ್ಚು ಸಂಶೋಧನಾ ಪ್ರಬಂಧಗಳು ಪ್ರಕಟಗೊಂಡವು.

ಇದೇ ವೇಳೆ ಜೆಎನ್‌ಎನ್‌ಸಿಇಯಲ್ಲಿ ಉತ್ಪಾದನೆಗೊಂಡ ಬಯೋ ಡಿಸೆಲ್ ಅನ್ನು ಮೋಟಾರು ಕಾರಿಗೆ ಇಂಧನವಾಗಿ ಸೇರಿಸಲು ಅತಿಥಿಗಳು ಕೈಜೋಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0024.mp4

 

Tags: JNNCEKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಜೆಎನ್‌ಎನ್‌ಸಿಇ ಕಾಲೇಜ್ಶಿವಮೊಗ್ಗ_ನ್ಯೂಸ್
Share205Tweet123Send
Previous Post

ಸಹಕಾರಿ ಆಂದೋಲನವನ್ನು ಜನಾಂದೋಲನವನ್ನಾಗಿ ಪರಿವರ್ತಿಸಲು ಮೋದಿ ಸರಕಾರ ಪ್ರಯತ್ನ: ಅಮಿತ್ ಶಾ

Next Post

ಮೂರು ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ: ಕಿಟಕಿ ಗಾಜುಗಳಿಗೆ ಹಾನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೂರು ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ: ಕಿಟಕಿ ಗಾಜುಗಳಿಗೆ ಹಾನಿ

ಮೂರು ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ: ಕಿಟಕಿ ಗಾಜುಗಳಿಗೆ ಹಾನಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

March 9, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಈ ದಿನಗಳು ಮೈಸೂರು – ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರ ರದ್ದು

March 9, 2026
ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

March 9, 2026
ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

March 9, 2026
ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

March 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL