ಧರ್ಮಸ್ಥಳ ಸೌಜನ್ಯ ಪ್ರಕರಣವನ್ನು Dharmasthala Soujanya Case ನಿಷ್ಪಕ್ಷಪಾತ ತನಿಖೆ ನಡೆಸಿ ಅಪರಾಧಿಗಳಿಗೆ ತಕ್ಕ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ವಿವೇಕ ಶಿವಮೊಗ್ಗ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಈ ಘಟನೆ ನಡೆದು ಹನ್ನೊಂದು ವರ್ಷಗಳಾಗಿವೆ. ಸೌಜನ್ಯಳ ಪ್ರಕರಣದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಎಂದು ಬಿಂಬಿಸಲ್ಪಟ್ಟಿದ್ದ ಸಂತೋಷ್ ರಾವ್ ಎಂಬ ಯುವಕನನ್ನು ನಿರ್ದೋಷಿ ಎಂದು ಬಿಡುಗಡೆ ಮಾಡಿರುವುದು ಸ್ವಾಗತವೇ. ಆದರೆ ನಿಜವಾದ ಆರೋಪಿ ಯಾರು ಎಂದು ಇದುವರೆಗೂ ತಿಳಿದುಬಂದಿಲ್ಲ. ಆದ್ದರಿಂದ ನಿಜವಾದ ಆರೋಪಿಯನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Also read: ಮೌಲ್ಯಾಧಾರಿತ ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಮಂಜುನಾಥ ಸ್ವಾಮಿ ಅಭಿಮತ
ಧರ್ಮಸ್ಥಳದಲ್ಲಿ ಇದುವರೆಗೂ ಸುಮಾರು 462 ಅಸಹಜ ಸಾವಿನ ಪ್ರಕರಣಗಳು ದಾಖಲಾಗಿವೆ.ಅದರಲ್ಲಿ 90ಕ್ಕೂ ಹೆಚ್ಚು ಪ್ರಕರಣಗಳು ಮಹಿಳೆಯರದ್ದೇ ಆಗಿವೆ. ಇದನ್ನು ಗಂಭಿರವಾಗಿ ಪರಿಗಣಿಸಬೇಕು. ಪ್ರಕರಣವನ್ನು ಮಕ್ಕಳ ಹಕ್ಕುಗಳ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗ ಕಾರ್ಯತತ್ಪರರಾಗಿ ತಕ್ಷಣ ಕ್ರಮ ಕೈಗೊಳ್ಳಬೇಕು. ಪೊಲೀಸ್ ದೌರ್ಜನ್ಯಕ್ಕೆ ತುತ್ತಾದ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post