No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಮಾನಯಾನ ಆರಂಭದಿಂದ ಅಭಿವೃದ್ದಿಯ ವಿನೂತನ ಅಧ್ಯಾಯ ಆರಂಭ: ಸಚಿವ ಎಂ.ಬಿ. ಪಾಟೀಲ

kalpa News by kalpa News
August 31, 2023
in ಶಿವಮೊಗ್ಗ
0
Land will be handed over to Foxconn by July 1: Minister MB Patil
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ವಿಮಾನಯಾನ ಆರಂಭದಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ  ಅಭಿವೃದ್ದಿಯ ವಿನೂತನ ಅಧ್ಯಾಯ ಆರಂಭವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ದಿ ಸಚಿವ ಎಂ.ಬಿ. ಪಾಟೀಲ Minister MBPatil ನುಡಿದರು.

ಇಂದು ಸೋಗಾನೆಯ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ವಿಮಾನಯಾನ ಕಾರ್ಯಾಚರಣೆ ಮತ್ತು ಅಧಿಕೃತ ಜಾಲತಾಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದು ರಾಜ್ಯದ ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣವಾಗಿದ್ದು ರೂ.450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ರಸಋಷಿ ಕುವೆಂಪು ಅವರ ಹೆಸರನ್ನು ಹೊರಲಿರುವ ಈ ವಿಮಾನ ನಿಲ್ದಾಣದಿಂದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ. ಈ ಮೂಲಕ ಮಲೆನಾಡು ಮತ್ತು ಮಧ್ಯಮ ಕರ್ನಾಟಕದ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಆಗಲಿದೆ ಎಂದರು.

ಮುಂದಿನ ಒಂದು ವರ್ಷ ಕಾಲ ಶಿವಮೊಗ್ಗ- ಬೆಂಗಳೂರು ನಡುವೆ ಪ್ರಯಾಣಿಸುವ ಪ್ರತಿಯೊಬ್ಬರ ಟಿಕೆಟ್ ಮೇಲೆ ₹500 ರುಪಾಯಿ ರಾಜ್ಯ ಸರ್ಕಾರ ಸಬ್ಸಿಡಿ ನೀಡಲಿದೆ ಎಂದು ಸಚಿವರು ಘೋಷಿಸಿದರು.

779 ಎಕರೆ ವಿಸ್ತಾರದಲ್ಲಿ ನಿರ್ಮಿಸಿರುವ ವಿಮಾನ ನಿಲ್ದಾಣದಲ್ಲಿ ಮೂಲಯೋಜನೆಯ ವಿನ್ಯಾಸವನ್ನು ಪರಿಷ್ಕರಿಸಿ, ಏರ್‍ಬಸ್-320 ಮಾದರಿಯ ವಿಮಾನಗಳು ಕೂಡ ಬಂದಿಳಿಯುವ ಮತ್ತು ರಾತ್ರಿ ವೇಳೆ ಇಳಿಯುವ ಸೌಲಭ್ಯಗಳನ್ನು ಕೂಡ ಕಲ್ಪಿಸಲಾಗುತ್ತಿದೆ.  ಸದ್ಯಕ್ಕೆ ಇಲ್ಲಿಂದ ಬೆಂಗಳೂರಿಗೆ ಕನೆಕ್ಟಿಂಗ್ ವಿಮಾನಯಾನ ಸೇವೆ ಲಭ್ಯವಾಗಲಿದೆ. ಬೆಂಗಳೂರಿನಿಂದ  ಚೆನ್ನೈ, ಮುಂಬೈ ಮತ್ತು ದೆಹಲಿಗೆ ತೆರಳಲಿರುವ ಇಂಡಿಗೋ ಸಂಸ್ಥೆಯ ವಿಮಾನಗಳ ಮೂಲಕ ಪ್ರಯಾಣವನ್ನು ಮುಂದುವರಿಸಬಹುದು. ಉಡಾನ್ ಯೋಜನೆಯಡಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಸದ್ಯದಲ್ಲೇ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ದೆಹಲಿ,  ಹೈದರಾಬಾದ್ ಸೇರಿದಂತೆ ದೇಶದ ನಾನಾ ನಗರಗಳಿಗೆ ಇಲ್ಲಿಂದ ನೇರ ವಿಮಾನಯಾನ ಆರಂಭಿಸಲಾಗುವುದು ಎಂದರು.

ರಾಜ್ಯ ಸರ್ಕಾರದಿಂದಲೇ ವಿಮಾನ ನಿಲ್ದಾಣ ನಿರ್ವಹಣೆ ಮಾಡುವ ಯೋಜನೆಯಿದ್ದು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಪ್ರಥಮವಾಗಿ ನಿರ್ವಹಣೆ ಆರಂಭವಾಗಲಿದೆ. ಇದರಿಂದ ಸರ್ಕಾರಕ್ಕೆ ಆದಾಯ ಮತ್ತು ಆಸ್ತಿ ಉಳಿಯಲಿದೆ. ಈ ಕುರಿತು ಸಾಧಕ-ಬಾಧಕಗಳನ್ನು ತಿಳಿದು ಮುನ್ನಡೆಯುತ್ತೇವೆ. ಎಂದರು.

  ರಸ್ತೆ-ರೈಲ್ವೆ-ಏರ್‍ವೇ ಇಂದ ಆರ್ಥಿಕ, ಔದ್ಯೋಗಿಕ ಬೆಳವಣಿಗೆ ಸಾಧ್ಯವಾಗಿದ್ದು, ಮುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿ ರೈತರ ಸಹಕಾರದೊಂದಿಗೆ ಕೈಗಾರಿಕೆಗಳನ್ನು ತರುವ ಉದ್ದೇಶ ಇದೆ. ಜೊತೆಗೆ, ಯೋಜನೆಯ ಕನಸು ಕಂಡು, ಅದರ ಅನುಷ್ಠಾನಕ್ಕೆ ಶ್ರಮಿಸಿದ ಯಡಿಯೂರಪ್ಪ ಮತ್ತು ಉಳಿದವರ ಪ್ರಯತ್ನಗಳನ್ನು ಉಲ್ಲೇಖಿಸಿದರು.

Also read: ಶ್ರೀ ರಾಘವೇಂದ್ರ ಸ್ವಾಮಿ 352ನೇ ಆರಾಧನಾ ಮಹೋತ್ಸವ: ಸ್ವರ್ಣ ಪಾದುಕೆ ಸಮರ್ಪಣೆ

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ MadhuBangarappa ಮಾತನಾಡಿ, ವಿಮಾನ ನಿಲ್ದಾಣಕ್ಕಾಗಿ ಶ್ರಮಿಸಿದ ಎಲ್ಲ ಜನಪ್ರತಿನಿಧಿಗಳು ಮತ್ತು ಭೂಮಿ ನೀಡಿದ ರೈತರಿಗೆ ಧನ್ಯವಾದಗಳು. ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ, ಕೈಗಾರಿಕೆಗಳಿಗೆ ನೆರವು ಸೇರಿದಂತೆ ಜಿಲ್ಲೆಯ ಅಭಿವೃದ್ದಿಗೆ ಸಹಕರಿಸಲಾಗುವುದು. ಹಾಗೂ ಜನಸಾಮಾನ್ಯರು, ಬಡವರು ವಿಮಾನ ನಿಲ್ದಾಣದಲ್ಲಿ ಹಾರಾಡುವ ವ್ಯವಸ್ಥೆ ಮಾಡುತ್ತೇವೆಂಬ ವಿಶ್ವಾಸ ಇದೆ ಎಂದ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಜಿಲ್ಲೆಯಲ್ಲಿ ಕೈಗಾರಿಕೆಗೆ ಹೆಚ್ಚಿನ ಸಹಕಾರ ನೀಡಲಿದ್ದಾರೆಂಬ ಭರವಸೆ ವ್ಯಕ್ತಿಪಡಿಸಿದರು.

ಸಂಸದ ಬಿ.ವೈ. ರಾಘವೇಂದ್ರ MPRaghavendra ಮಾತನಾಡಿ, ಸಹ್ಯಾದ್ರಿ ನಗರಕ್ಕೆ ಲೋಹದ ಹಕ್ಕಿಯ ಆಗಮನ ಆಗಿದೆ. ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಹಾಗೂ ಭೂಮಿ ನೀಡಿದ ರೈತರಿಗೆ ಧನ್ಯವಾದಗಳನ್ನು ತಿಳಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪನವರು BSYadiyurappa ಮಾತನಾಡಿ, ಶಿವಮೊಗ್ಗ ಜಿಲ್ಲೆಯ ಬಹು ವರ್ಷಗಳ ವಿಮಾನ ನಿಲ್ದಾಣದ ಕನಸು ನಿಮ್ಮೆಲ್ಲರ ಬೆಂಬಲದಿಂದ ನನಸಾಗಿದೆ. ಕೈಗಾರಿಕೆ ಬೆಳವಣಿಗೆ, ಉದ್ಯೋಗ ಸೃಷ್ಟಿಗೆ ಉತ್ತಮ ಅವಕಾಶಗಳು ತೆರೆದುಕೊಳ್ಳಲಿವೆ. ನಿಲ್ದಾಣದಲ್ಲಿ ರಾತ್ರಿ ನಿಲ್ದಾಣಕ್ಕೂ ವ್ಯವಸ್ಥೆ ಆಗುತ್ತಿದ್ದು ಕೆಲವೇ ವರ್ಷಗಳಲ್ಲಿ ಈ ನಿಲ್ದಾಣ ಅಂತರಾಷ್ಟ್ರೀಯ ನಿಲ್ದಾಣ ಆಗುವುದರಲ್ಲಿ ಅನುಮಾನವಿಲ್ಲ ಎಂದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ ಪಾಟೀಲ,  ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಶಿವಮೊಗ್ಗ, ಸಂಸದದಾದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಶಾಸಕ ಆರಗ ಜ್ಞಾನೇಂದ್ರ ಮುಂತಾದ ಗಣ್ಯರೊಂದಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 9.50ಕ್ಕೆ ಹೊರಟ ಚೊಚ್ಚಲ ವಿಮಾನವು 11.05ಕ್ಕೆ ಶಿವಮೊಗ್ಗಕ್ಕೆ ಬಂದಿಳಿಯುವುದರೊಂದಿಗೆ ಮಲೆನಾಡಿನಲ್ಲಿ ವಿಮಾನಯಾನದ ಹೊಸ ಅಧ್ಯಾಯ ಆರಂಭವಾಯಿತು.

ಈ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ವಾಟರ್ ಸೆಲ್ಯೂಟ್ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ಜೊತೆಗೆ ಬಂದಿಳಿದ ಎಲ್ಲ ಪ್ರಯಾಣಿಕರಿಗೂ ಸಚಿವ ಮಧು ಬಂಗಾರಪ್ಪ ಅವರಲ್ಲದೆ ವಿಮಾನ ನಿಲ್ದಾಣದ ಸಿಬ್ಬಂದಿ ಗುಲಾಬಿ ಹೂವು ಮತ್ತು ಸಿಹಿ ನೀಡಿ ಸ್ವಾಗತಿಸಿದರು.

ವಾಪಸ್ ಬೆಂಗಳೂರಿಗೆ ಹೊರಟ ವಿಮಾನದಲ್ಲಿ ಸಚಿವ ಎಂ.ಬಿ. ಪಾಟೀಲ ಜತೆ ಸಚಿವ ಮಧು ಬಂಗಾರಪ್ಪ ಕೂಡ ಪ್ರಯಾಣಿಸಿದರು. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ನೀಡಿದ ರೈತರ ಪರವಾಗಿ ಇಬ್ಬರು ರೈತರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಗೋಪಾಲಕೃಷ್ಣ ಬೇಳೂರು, ಆರಗ ಜ್ಞಾನೇಂದ್ರ ಶಾರದಾ ಪೂರ್ಯಾನಾಯ್ಕ, ವಿಧಾನ ಪರಿಷತ್ ಶಾಸಕರಾದ ರುದ್ರೇಗೌಡ, ಡಿ.ಎಸ್. ಅರುಣ್, ಭಾರತಿ ಶೆಟ್ಟಿ, ಮಾಜಿ ಶಾಸಕರಾದ ಕೆ.ಎಸ್. ಈಶ್ವರಪ್ಪ, ಮೂಲಸೌಕರ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಕೆಎಸ್‍ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ಎಂ. ಆರ್. ರವಿ, ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ, ವಿಮಾನ ನಿಲ್ದಾಣದ ನಿರ್ದೇಶಕ ಕ್ಯಾ.ಶಮಂತ್, ಡಿಎಸ್‍ಪಿ ಚಂದ್ರಶೇಖರ್ ಉಪಸ್ಥಿತರಿದ್ದರು.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀ ರಾಘವೇಂದ್ರ ಸ್ವಾಮಿ 352ನೇ ಆರಾಧನಾ ಮಹೋತ್ಸವ: ಸ್ವರ್ಣ ಪಾದುಕೆ ಸಮರ್ಪಣೆ

Next Post

ಮಾರಿಯಟ್ ಬೊನ್ವೊಯ್ ಎಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಿಡುಗಡೆ

kalpa News

kalpa News

Next Post
ಮಾರಿಯಟ್ ಬೊನ್ವೊಯ್ ಎಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಿಡುಗಡೆ

ಮಾರಿಯಟ್ ಬೊನ್ವೊಯ್ ಎಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಿಡುಗಡೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL