ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಹಾಗೂ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ವಿರೂಪಗೊಳಿಸಿರುವವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಹಾಗೂ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ವಿರೂಪಗೊಳಿಸಿ, ಬೆಳಗಾವಿಯಲ್ಲಿ ಶಾಂತಿ ಕದಡುವ ವಾತಾವರಣ ಸೃಷ್ಟಿಸುತ್ತಿರುವ ಎಂಇಎಸ್ ಪುಂಡರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ನಾಗರೀಕ ರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್. ರಾಘವೇಂದ್ರ, ಖಜಾಂಚಿ ಶಿವಮೊಗ್ಗ ವಿನೋದ್, ಗೌರವಾಧ್ಯಕ್ಷ ಲಕ್ಷ್ಮಿಕಾಂತ , ಸಂಘಟನಾ ಕಾರ್ಯದರ್ಶಿ ಹರೀಶ್, ಕಾನೂನು ಸಲಹೆಗಾರ ಶಬರೀಶ್, ನಗರ ಘಟಕದ ಉಪಾಧ್ಯಕ್ಷ ಸತೀಶ್, ವೆಂಕಟೇಶ್, ಸಮಿತಿಯ ಪ್ರಮುಖರಾದ ರುದ್ರೇಶ್ , ಹರ್ಷಿತ್, ಜಸ್ಟಿನ್ ಸಾಗರ್, ಶಿವಕುಮಾರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post