ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಛಾಯಾಗ್ರಾಹಕರಿಗೆ ಕೊರೋನ ಲಸಿಕೆ ಮತ್ತು ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಛಾಯಾಗ್ರಾಹಕರ ಸಂಘದ ವತಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲೆಯಲ್ಲಿ ಛಾಯಾಗ್ರಾಹಣ, ವೀಡಿಯೋ ಚಿತ್ರೀಕರಣ ವೃತ್ತಿ ಆಧರಿಸಿದ ಸುಮಾರು 3000 ಮಂದಿ ಕಾರ್ಯನಿರ್ವಹಿಸುತಿದ್ದು, ಲಾಕ್‌ಡೌನ್ ಅವಧಿಯಲ್ಲಿ ಚಿಕ್ಕಪುಟ್ಟ ಕಾರ್ಯಕ್ರಮವನ್ನು ನಿರ್ವಹಣೆ ಮಾಡುವ ಮೂಲಕ ವೃತ್ತಿ ಬದುಕು ನಡೆಸುತ್ತಿದ್ದೇವೆ. ಇದೀಗ ಕೊರೋನ ಸೋಂಕು ಹರಡುತ್ತಿರುವ ಕಾರಣ ಛಾಯಾಗ್ರಾಹಕರು ಹಾಗೂ ವೀಡಿಯೋ ಚಿತ್ರೀಕರಣ ಮಾಡುವವರು, ಇವರ ಸಹಾಯಕರು, ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿರುವವರು ಆತಂಕ ಎದುರಿಸುವಂತಾಗಿದೆ. ಹೀಗಾಗಿ ಈ ವೃತ್ತಿ ನಿರ್ವಹಿಸುತ್ತಿರುವವರಿಗೆ ಆದ್ಯತೆ ಮೇರೆಗೆ ಕೊರೋನ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆರ್ಥಿಕವಾಗಿ ಹಿಂದುಳಿದ ಛಾಯಗ್ರಾಹಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಆಗ್ರಹಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post