ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿವಿಧ ಕೈಗಾರಿಕಾ ವಸಾಹತುಗಳಲ್ಲಿ ಮೂಲಭೂತ ಸೌಕರ್ಯದಲ್ಲಿರುವ ಕೊರತೆಯನ್ನು ನೀಗಿಸುವುದು ಮುಖ್ಯವಾಗಿ ದೇವಕಾತಿ ಕೊಪ್ಪ ಮತ್ತು ಸಿದ್ಧಲೀಪುರ ಕೈಗಾರಿಕಾ ವಸಾಹತುವಿನ ವಿದ್ಯುತ್ ಸರಬರಾಜುನಲ್ಲಿರುವ ಕೊರತೆಯನ್ನು ನೀಗಿಸುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿ ಕೆ. ಎಸ್. ಈಶ್ವರಪ್ಪನವರ ಮೂಲಕ ಅವರ ವಿಧಾನಸೌದದ ಕಚೇರಿಯಲ್ಲಿ ಬೃಹತ್ ಮತ್ತು ಮಾಧ್ಯಮ ಕೈಗಾರಿಕಾ ಮಂತ್ರಿ ಮುರುಗೇಶ್ ನಿರಾಣಿಯವರನ್ನು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರೂ ಕೈಗಾರಿಕೊದ್ಯಮಿಯೂ ಆದ ರುದ್ರೇಗೌಡ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರು ಮತ್ತು ಪದಾಧಿರಿಗಳು ಶಿವಮೊಗ್ಗ ನಗರಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜ್ಯೋತಿಪ್ರಕಾಶ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್, ಮಾಜಿ ಅಧ್ಯಕ್ಷ ಶಂಕರಪ್ಪ, ಕಾರ್ಯದರ್ಶಿ, ವಸಂತ ಹೋಬಳಿದರ್, ಕೈಗಾರಿಕಾಭಿವೃದ್ಧಿ ಸಮಿತಿ ಛೇರ್ಮನ್ ಎಂ. ರಾಜು, ಸಹಕಾರ್ಯದರ್ಶಿ ಜಿ. ವಿಜಯ್ ಕುಮಾರ್, ಸುಕುಮಾರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post