ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ವಿದ್ಯಾರ್ಥಿನಿಲಯಗಳಿಗೆ ಹಾಗೂ ಶಾಲೆ, ಆಸ್ಪತ್ರೆಗಳಿಗೆ ಗ್ಯಾಸ್ ಸಿಲಿಂಡರ್ ಗಳನ್ನು #Gas cylinder ಸಮರ್ಪಕವಾಗಿ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎನ್‌ಎಸ್‌ಯುಐ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಆಸ್ಪತ್ರೆ ಗಳು ಹಾಗೂ ಶಾಲೆಗಳಿವೆ ವಿದ್ಯಾರ್ಥಿ ನಿಲಯಗಳಲ್ಲಿ ಮತ್ತು ಶಾಲೆಗಳಲ್ಲಿ ಸಾವಿರಾರು ಬಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಬಂದಿರುತ್ತಾರೆ ಇಂತಹಾ ವಿದ್ಯಾರ್ಥಿಗಳಿಗೆ ಸರ್ಕಾರವೇ ಊಟ ಮತ್ತು ವಸತಿಯನ್ನು ಕಲ್ಪಿಸುತ್ತಾ ಬರುತ್ತಿದೆ. ಆದರೆ ಇತ್ತೀಚಿನ ದಿನಮಾನಗಳಲ್ಲಿ ಇರಾನ್ ಮತ್ತು ಇಸ್ರೇಲ್ ದೇಶಗಳ ನಡುವೆ ನಡೆಯುತ್ತಿರುವ ಯುದ್ಧದಿಂದ ಗ್ಯಾಸ್ ಸಿಲಿಂಡರ್ ಗಳ ಅಭಾವ ಹೆಚ್ಚಾಗಿದ್ದು ಹಾಸ್ಟೆಲ್ ಗಳಿಗೆ, ಶಾಲೆಗಳಿಗೆ, ಮತ್ತು ಆಸ್ಪತ್ರೆ ಗಳಿಗೆ ಯಾವುದೇ ರೀತಿಯ ತೊಂದರೆ ಗಳಾಗದಂತೆ ಸಮರ್ಪಕವಾಗಿ ಪೂರೈಕೆಮಾಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷೆಗಳು ಪ್ರಾರಂಭವಾಗಿರುವುದರಿಂದ ವಿದ್ಯಾರ್ಥಿಗಳು ಬಹಳ ಆತಂಕದ ಪರಿಸ್ಥಿತಿಯಲ್ಲಿದ್ದಾರೆ. ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಆಗುತ್ತಿರುವ ಆತಂಕವನ್ನು ದೂರ ಮಾಡಬೇಕು. ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿ ನಿಲಯಗಳಿಗೆ ಶಾಲೆಗಳಿಗೆ ಆಸ್ಪತ್ರೆ ಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗ್ಯಾಸ್ ಸಿಲೆಂಡರ್ ಗಳನ್ನು ಪೂರೈಕೆ ಮಾಡಲು ಸಂಬಂಧಪಟ್ಟ ಇಲಾಖೆಗಳಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳು ವಂತೆ ಸೂಚಿಸಬೇಕು ಎಂದು ಕೋರಲಾಗಿದೆ.
ಈ ಸಂದರ್ಭದಲ್ಲಿ NSUIನ ಜಿಲ್ಲಾ ಅಧ್ಯಕ್ಷರಾದ ವಿಜಯ್ ಕುಮಾರ್, ಕಾರ್ಯಾದ್ಯಕ್ಷರಾದ ರವಿಕುಮಾರ್, ನಗರ ಉಪಾಧ್ಯಕ್ಷರಾದ ಆದಿತ್ಯ, ಸುಭಾನ್, ಶ್ರೀಕಾಂತ್, ಆಕಾಶ್, ಲೋಹಿತ್ ಕುಮಾರ್, ಪ್ರಮೋದ್, ಪ್ರಭು, ಜೀವನ್, ಯೂಸೂವ್, ದರ್ಶನ, ಸಾದುಲ್ಲ ದೀಪಕ್, ಮದನ್, ಭರತ್, ಗಣೇಶ ಮತ್ತು NSUIನ ಪದಾಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















