ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಅಬ್ಬರ ಹೆಚ್ಚಾಗಿದ್ದು, ಜಿಲ್ಲಾಡಳಿತ ಹಗಲಿರಳೂ ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿದೆ. ಮಹಾಮಾರಿಯ ವಿರುದ್ಧದ ಈ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿರುವ ಮಾಧ್ಯಮ ಕ್ಷೇತ್ರದ ಎಲ್ಲಾ ವಯೋಮಾನದವರಿಗೆ ಕೊರೋನಾ ಲಸಿಕೆ ನೀಡುವಂತೆ ಒತ್ತಾಯಿಸಿ ಸಚಿವ ಈಶ್ವರಪ್ಪ ಅವರಿಗೆ ಮನವಿ ನೀಡಲಾಯಿತು.
ಮಾಧ್ಯಮ ಪ್ರತಿನಿಧಿಗಳು, ಫೋಟೋ, ವೀಡಿಯೊ ಜರ್ನಲಿಸ್ಟ್‌ಗಳು ಈ ದಿಸೆಯಲ್ಲಿ ಅಹೋರಾತ್ರಿ ಕೆಲಸ ಮಾಡುತ್ತಿದ್ದಾರೆ. ಈ ಕಾರಣದಿಂದಲೇ ಪತ್ರಕರ್ತರನ್ನೂ ಸರ್ಕಾರ ಕೊರೋನಾ ವಾರಿಯರ್‍ಸ್‌ಗಳು ಎಂದು ಪರಿಗಣಿಸಿವೆ. ದಿನನಿತ್ಯ ಮುಂಚೂಣಿ ವಾರಿಯರ್‍ಸ್‌ಗಳಾಗಿ ಕೆಲಸ ನಿರ್ವಹಿಸುತ್ತಿದ್ದು, ಇಂತಹ ಸಂಕಷ್ಟದ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವಯೋಮಾನದ ಪತ್ರಕರ್ತರಿಗೆ ಕೋವಿಡ್ ಲಸಿಕೆಯ ಅಗತ್ಯವಿದೆ. ಆದ್ದರಿಂದ ಎಲ್ಲಾ ವಯೋಮಾನದ (18 ವರ್ಷ ಮೇಲ್ಪಟ್ಟು) ಮಾಧ್ಯಮ ಪ್ರತಿನಿಧಿಗಳು ಮತ್ತು ಕುಟುಂಬ ವರ್ಗಕ್ಕೆ ತಕ್ಷಣದಿಂದಲೇ ಕೋವಿಡ್ ಲಸಿಕೆ ಪಡೆದುಕೊಳ್ಳಲು ಅವಕಾಶ ಮಾಡಿಕೊಡುವ ಅಗತ್ಯವಿದೆ ಎಂದು ತಿಳಿಸಲಾಗಿದೆ.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರಸ್ ಟ್ರಸ್ಟ್ ವತಿಯಿಂದ ಮಾಡುತ್ತಿರುವ ಈ ಮನವಿಯನ್ನು ತುರ್ತು ಅಗತ್ಯವೆಂದು ಪರಿಗಣಿಸಿ 18 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ಕೋವಿಡ್ ಲಸಿಕೆ ನೀಡಲು ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಬೇಕೆಂದು ತಮ್ಮಲ್ಲಿ ವಿನಂತಿ ಮಾಡಲಾಯಿತು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ವೈದ್ಯನಾಥ್, ಕಾರ್ಯದರ್ಶಿ ನಾಗರಾಜ್ ನೇರಿಗೆ ಇನ್ನಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post