ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ನಗರ ಪ್ರದೇಶ ಹಾಗೂ ತಾಲೂಕು ಕೇಂದ್ರಗಳಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಂದ ಸ್ವಯಂ ಉದ್ಯೋಗ ಯೋಜನೆಯಡಿ (ಇ-ಕಾರ್ಟ್) ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲು ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತಿಯುಳ್ಳವರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆಗಳ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಮಾಚ್ 15ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-279222 ನ್ನು ಸಂಪರ್ಕಿಸುವುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















