ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಸಂಸ್ಥೆಯು ಬೆಂಗಳೂರಿನಲ್ಲಿ ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಪಡೆಯಲಿಚ್ಚಿಸುವ ಏರೋನಾಟಿಕಲ್, ಮೆಕಾನಿಕ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್, ಸಿವಿಲ್, ಕಂಪ್ಯೂಟರ್ ಸೈನ್ಸ್ ಮತ್ತು ಇನ್‌ಫರ್‍ಮೇಷನ್ ಸೈನ್ಸ್, ಮೆಟಲರ್ಜಿ, ಕಮರ್ಷಿಯಲ್ ಪ್ರಾಕ್ಟೀಸ್ ಇಂಜಿನಿಯರಿಂಗ್‌ಗಳನ್ನು ಪಾಸಾಗಿರುವ ಅಭ್ಯರ್ಥಿಗಳು 2ನೇ ಕ್ರಾಸ್, ಪಂಪನಗರ, ಗುತ್ಯಪ್ಪ ಕಾಲೋನಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಅರ್ಜಿಯನ್ನು ಮಾರ್ಚ್ 10ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ದೂ,ಸಂ. 08182-255294, 8861890866, 9535312531 ಗಳನ್ನು ಸಂಪರ್ಕಿಸುವುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















