ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ #Anganavadi ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ. ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಈ ಆಯ್ಕೆಯನ್ನು ಅರ್ಹ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ಆಧಾರದ ಮೇಲೆ ಪಾರದರ್ಶಕವಾಗಿ ಆಯ್ಕೆ ಮಾಡಲಾಗುವುದು.
Also read: ಒಂದು ರಾಷ್ಟ್ರ ಒಂದು ಚುನಾವಣೆ | ಮೋದಿ ಸಂಪುಟದಲ್ಲಿ ಕೈಗೊಂಡ ಮಹತ್ವದ ನಿರ್ಧಾರವೇನು?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post