No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೌಕರರ ವಿರುದ್ಧ ಮಿಥ್ಯಾರೋಪ ಮಾಡುವವರ ವಿರುದ್ಧ ಸೂಕ್ತ ಕ್ರಮ: ಸಿ.ಎಸ್. ಷಡಾಕ್ಷರಿ ಎಚ್ಚರಿಕೆ

kalpa News by kalpa News
January 16, 2023
in ಶಿವಮೊಗ್ಗ
0
ನೌಕರರ ವಿರುದ್ಧ ಮಿಥ್ಯಾರೋಪ ಮಾಡುವವರ ವಿರುದ್ಧ ಸೂಕ್ತ ಕ್ರಮ: ಸಿ.ಎಸ್. ಷಡಾಕ್ಷರಿ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಗೌರವಯುತವಾಗಿ ಸೇವೆ ಸಲ್ಲಿಸುತ್ತಿರುವ ನೌಕರರ ವಿರುದ್ಧ ಸಲ್ಲದ ಮಿಥ್ಯಾರೋಪ ಮಾಡುವ, ಯಾವುದೇ ಸಮಾಜಘಾತಕ ವ್ಯಕ್ತಿ ಅಥವಾ ಶಕ್ತಿಗಳ ವರ್ತನೆಯನ್ನು ಸಹಿಸಿಕೊಳ್ಳಲಾಗುವುದಿಲ್ಲ. ಅದಕ್ಕೆ ಸೂಕ್ತ ಉತ್ತರ ನೀಡಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ತಿಳಿಸಿದ್ದಾರೆ.

ಅವರು ಇತ್ತೀಚೆಗೆ ಸಾಗರ ತಾಲೂಕಿನ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಶಿಕ್ಷಕರ ವಿರುದ್ಧ ಆಧಾರರಹಿತವಾಗಿರುವ ಸುಳ್ಳು ಆರೋಪ ಮಾಡಿದ್ದಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹರಿಯಬಿಟ್ಟು ನೌಕರರಿಗೆ ಮಾನಸಿಕವಾಗಿ ನೋವನ್ನುಂಟು ಮಾಡುತ್ತಿರುವ ವ್ಯಕ್ತಿಯ ಚಟುವಟಿಕೆಗಳನ್ನು ಸಂಘಟನೆ ಗಂಭೀರವಾಗಿ ಪರಿಗಣಿಸಿದೆ. ಮಿಥ್ಯಾರೋಪ ಮಾಡುವ ವ್ಯಕ್ತಿಗಳು ಸಂಬಂಧಿಸಿದ ಇಲಾಖೆ ಅಥವಾ ಸಂಬಂಧಿಸಿದ ಮೇಲಾಧಿಕಾರಿಗಳಲ್ಲಿ ದೂರು ನೀಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ತಪ್ಪಿದಲ್ಲಿ ಇಂತಹ ಕುತ್ಸಿಕ ಮನಸ್ಥಿತ ಹೊಂದಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸಂಘಟನೆ ಸಕಾಲಿಕ ನಿರ್ಧಾರ ಕೈಗೊಳ್ಳಲಿದೆ ಎಂದವರು ತಿಳಿಸಿದ್ದಾರೆ.
ಶಿಕ್ಷಕರ ಸೇವೆಗೆ ಸಮಾಜದಲ್ಲಿ ವಿಶೇಷ ಗೌರವಯುತ ಸ್ಥಾನಮಾನವಿದೆ. ಅದರಲ್ಲೂ ವಿಶೇಷವಾಗಿ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶಿಕ್ಷಕರನ್ನು ಗೌರವದಿಂದ ನಡೆಸಿಕೊಳ್ಳಬೇಕು. ಅದರ ಬದಲಾಗಿ ಅವರನ್ನು ನಿಂಧಿಸುವುದು, ಸುಳ್ಳು ಆರೋಪ ಮಾಡಿ, ಅವರ ಮನಸ್ಸಿಗೆ ನೋವುಂಟು ಮಾಡುವುದರಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗಲಿದೆ. ಆರೋಪ ಮಾಡುವ ಮುನ್ನ ಸಂಭವಿಸಬಹುದಾದ ಘಟನಾವಳಿಗಳು, ಸಾರ್ವಜನಿಕರಲ್ಲಿ ಶಿಕ್ಷಕರ ಬಗ್ಗೆ ಮೂಡುವ ಭಾವನೆಯಿಂದ ಶಿಕ್ಷಕರ ಗೌರವಕ್ಕೆ ಧಕ್ಕೆ ಉಂಟಾಗಲಿದೆ. ಇದು ಸಲ್ಲದು ಎಂದವರು ತಿಳಿಸಿದ್ದಾರೆ.

Also read: ಶಿವಮೊಗ್ಗದಲ್ಲಿ ರಸ್ತೆ ಅಪಘಾತ: ಬೈಕ್ ಸವಾರ ದಾರುಣ ಸಾವು

ಸಾಗರ ತಾಲೂಕಿನಲ್ಲಿ ಶಿಕ್ಷಣ ಇಲಾಖೆಯ ವಿವಿಧ ಕ್ಲಸ್ಟರ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯೋಪಾಧ್ಯಾಯರು, ಅಧಿಕಾರಿ-ಸಿಬ್ಬಂಧಿಗಳ ವಿರುದ್ಧ ಸುಳ್ಳು ಆರೋಪ ಮಾಡಿದ್ದಲ್ಲದೆ ಸಾಮಾಜಿಕ ಸ್ವಾಸ್ಥ್ಯ ಹಾಳುಮಾಡುತ್ತಿರುವ ವ್ಯಕ್ತಿಯೊಬ್ಬನ ವಿರುದ್ಧ ನೊಂದ ನೌಕರರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಲು ಈಗಾಗಲೇ ಸೂಚಿಸಲಾಗಿದೆ. ಈ ಬಗ್ಗೆ ಸಕ್ಷಮ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದವರು ತಿಳಿಸಿದ್ದಾರೆ.
ನೌಕರರ ಮೇಲೆ ಸಲ್ಲದ ಆರೋಪ ಮಾಡುವ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಡುವ ವಿಕೃತ ಮನಸ್ಸಿನ ವ್ಯಕ್ತಿಗಳನ್ನು ಪೊಲೀಸ್ ಇಲಾಖೆ ಸೂಕ್ಷö್ಮವಾಗಿ ಗಮನಿಸಿ, ಪರಿಶೀಲಿಸಿ, ಸಾಮಾಜಿಕ ಕಂಟಕಪ್ರಾಯವಾಗುವ ಇಂತಹ ವ್ಯಕ್ತಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಅವರು ಪೊಲೀಸ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಶಿಕ್ಷಕರು ಸೇರಿದಂತೆ ಸರ್ಕಾರದ ಬೇರೆ ಯಾವುದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಇಂತಹ ಆರೋಪಗಳಿಂದ ಮಾನಸಿಕ ನೆಮ್ಮದಿ ಕಳೆದುಕೊಳ್ಳದಿರುವಂತೆ ಹಾಗೂ ಸಂಘಟನೆಯು ತಮ್ಮ ನೆರವಿಗೆ ಸದಾ ಧಾವಿಸಲಿದೆ ಎಂದು ತಿಳಿಸಿರುವ ಅವರು, ತಮ್ಮ ಕಾರ್ಯಕ್ಷೇತ್ರದಲ್ಲಿ ಸೌಲಭ್ಯಗಳಿಗಾಗಿ ಆಗಮಿಸುವ ಸಾರ್ವಜನಿಕರಿಗೆ ಉತ್ತಮ ಹಾಗೂ ತ್ವರಿತಗತಿಯ ಸೇವೆ ನೀಡುವಂತೆ ಅವರು ನೌಕರರಲ್ಲಿ ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ರಸ್ತೆ ಅಪಘಾತ: ಬೈಕ್ ಸವಾರ ದಾರುಣ ಸಾವು

Next Post

ರಕ್ಷಣಾ ಕ್ಷೇತ್ರದ 400 ಉತ್ಪನ್ನ ದೇಶದಲ್ಲೇ ಉತ್ಪಾದನೆ: ಕೇಂದ್ರ ಸಚಿವ ಅನುರಾಗ್ ಠಾಕೂರ್

kalpa News

kalpa News

Next Post
ರಕ್ಷಣಾ ಕ್ಷೇತ್ರದ 400 ಉತ್ಪನ್ನ ದೇಶದಲ್ಲೇ ಉತ್ಪಾದನೆ: ಕೇಂದ್ರ ಸಚಿವ ಅನುರಾಗ್ ಠಾಕೂರ್

ರಕ್ಷಣಾ ಕ್ಷೇತ್ರದ 400 ಉತ್ಪನ್ನ ದೇಶದಲ್ಲೇ ಉತ್ಪಾದನೆ: ಕೇಂದ್ರ ಸಚಿವ ಅನುರಾಗ್ ಠಾಕೂರ್

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL