ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
2022-23ನೇ ಸಾಲಿನ 233 ಮುಂದುವರೆದ ಕಾಮಗಾರಿಗಳು ಮತ್ತು 1137 ಹೊಸ ಕಾಮಗಾರಿಗಳು ಸೇರಿ ಒಟ್ಟು 1370 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಸರ್ಕಾರದ ಅನುಮೋದನೆ ದೊರೆತಿದೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಈ ಹಿಂದೆ ಮಂಡಳಿಯ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಿದಂತೆ ಮಂಡಳಿಯ 65ವಿಧಾನ ಸಭಾ ಮತ್ತು 21ವಿಧಾನ ಪರಿಷತ್ ಸೇರಿದಂತೆ ಒಟ್ಟು 86ಶಾಸಕರುಗಳಿಂದ ತಲಾ 33ಲಕ್ಷದಂತೆ ಕ್ರಿಯಾ ಯೋಜನೆ ಪ್ರಸ್ತಾವನೆ ಪಡೆದು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಸರ್ಕಾರವು 86 ಶಾಸಕರಿಗೆ ತಲಾ 1ಕೋಟಿಯಂತೆ 86ಕೋಟಿಗಳಿಗೆ ಹಾಗೂ ಶೇ.20ರಷ್ಟು ಹೆಚ್ಚುವರಿ ಕ್ರಿಯಾ ಯೋಜನೆ ರೂಪಿಸುವಂತೆ ನಿರ್ದೇಶನ ನೀಡಿತ್ತು. ಅದರಂತೆ ಸರ್ಕಾರಕ್ಕೆ ಸಲ್ಲಿಸಲಾದ ಒಟ್ಟು 102.53ಕೋಟಿ ರೂ.ಗಳ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದರು.

ಮಲೆನಾಡ ಭಾಗದ ರೈತರ, ಪ್ರವಾಹ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಅನುಕೂಲವಾಗುವಂತೆ ಅನುದಾನ ಒದಗಿಸಿ
-ರಾಘವೇಂದ್ರ, ಸಾಗರ
ಈ ಸಂದರ್ಭದಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಅವರು ಮಾತನಾಡಿ, ಮಲೆನಾಡು ಭಾಗದ ಜಿಲ್ಲೆಗಳಿಂದ ರಾಜ್ಯ ಸರ್ಕಾರಕ್ಕೆ ಸಂದಾಯವಾಗಿರುವ ರಾಜಸ್ವದ ಕುರಿತು ಸರ್ಕಾರದ ಗಮನಸೆಳೆದು, ಈ ಹಿಂದೆ ಸಲ್ಲಿಸಿದ ಪ್ರಸ್ತಾವನೆಯ ಮೊತ್ತಕ್ಕಿಂತ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಬೇಡಿಕೆ ಸಲ್ಲಿಸುವಂತೆ ಅಧ್ಯಕ್ಷರಲ್ಲಿ ಮನವಿ ಮಾಡಿದ ಅವರು, ಈ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯಲು ಬೆಳಗಾವಿಯ ಅಧಿವೇಶನ ಸಂದರ್ಭದಲ್ಲಿ ಮಂಡಳಿಯ ಸರ್ವ ಸದಸ್ಯರ ಸಭೆ ಕರೆದು ಸಮಾಲೋಚನೆ ನಡೆಸುವಂತೆಯೂ ಅವರು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಪ್ರೊ.ಲಿಂಗಣ್ಣ ಮಾಯಕೊಂಡ, ಕೆ.ಬಿ.ಅಶೋಕನಾಯ್ಕ್, ಕುಮಾರ ಬಂಗಾರಪ್ಪ, ಸಿ.ಎಂ.ನಿಂಬಣ್ಣ ಕಲಘಟಗಿ, ತಿಮ್ಮಯ್ಯ ಚಾಮರಾಜನಗರ, ವಿರೂಪಾಕ್ಷಪ್ಪ ಬ್ಯಾಡಗಿ, ಡಿ.ಎಸ್.ಅರುಣ್, ಮಂಡಳಿಯ ನಾಮನಿರ್ದೇಶಿತ ಸದಸ್ಯರು, ಆಡಳಿತಾಧಿಕಾರಿ ಕೆ.ಎಸ್.ಮಣಿ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post