ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವ ಪ್ರಸಿದ್ಧ ಜೋಗ ಜಲಪಾತದ ರಮಣೀಯತೆ ಕಣ್ಮನ ಸೆಳೆಯುವಂತಹದ್ದು. ಇದನ್ನು ಸರ್ವಋತು ಪ್ರವಾಸಿತಾಣವಾಗಿಸಲು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಯೋಜಿಸಲಾಗಿದೆ.
ಜಿಲ್ಲೆಯ ಜೋಗ ಜಲಪಾತದ ಬಳಿ ಸರ್ಕಾರಿ- ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) 116 ಕೋಟಿ ರೂ. ವೆಚ್ಚದಲ್ಲಿ ಪಂಚತಾರಾ ಹೋಟೆಲ್ ಹಾಗೂ ರೋಪ್ ವೇ ನಿರ್ಮಿಸಲು ಸಂಪುಟ ಸಭೆ ಅನುಮೋದಿಸಿದೆ.
ಅತ್ಯಾಧುನಿಕ ಮೂಲಭೂತ ಸೌಕರ್ಯ, ಐಷಾರಾಮಿ ಕಾಫಿಬಾರ್ ಗಳನ್ನು ಒಳಗೊಂಡಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲು ಉದ್ದೇಶಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಪರ್ವಕ್ಕೆ ಸದಾ ಸ್ಪಂದಿಸುವ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಧನ್ಯವಾದ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post