No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಏ.22: ರೇಡಿಯೋ ಶಿವಮೊಗ್ಗಕ್ಕೆ ವರ್ಷದ ಸಡಗರ-ಲಕ್ಷಾಂತರ ಕೇಳುಗರ ಹೃನ್ಮನ ತಲುಪಿದ ಸಾಧನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 20, 2023
in ಶಿವಮೊಗ್ಗ
0
ಮಾರ್ಚ್ 14ರಿಂದ ಶಿವಮೊಗ್ಗ ಎಫ್’ಎಂನಲ್ಲಿ ಎಸ್ಎಸ್ಎಲ್’ಸಿ ಪಾಠ: ಎಂದು ಯಾವ ಪಾಠ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಮಲೆನಾಡಿನ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರವಾದ ರೇಡಿಯೋ ಶಿವಮೊಗ್ಗ 90.8 ಎಫ್ ಎಂ ನಲ್ಲಿ ಕಾರ್ಯಕ್ರಮ ಪ್ರಸಾರ ಆರಂಭವಾಗಿ ಏ.22ಕ್ಕೆ ಒಂದು ವರ್ಷ ಪೂರೈಸುತ್ತಿದೆ. ಈ ಪಯಣದಲ್ಲಿ ಸಹಕಾರ ನೀಡಿದ ಎಲ್ಲಾ ಕೇಳುಗರಿಗೆ, ಜಾಹೀರಾತುದಾರರು ಹಾಗೂ ಹಿತೈಷಿಗಳಿಗೆ ಬಾನುಲಿ ಕೇಂದ್ರದ ನಿರ್ದೇಶಕರಾದ ಜಿ.ಎಲ್. ಜನಾರ್ದನ್ ಆತ್ಮೀಯ ಧನ್ಯವಾದಗಳನ್ನು ತಿಳಿಸಿದ್ದಾರೆ.

ಕಿಡ್ಸ್ (ಕೊಡಚಾದ್ರಿ ಡೆವೆಲ್ ಪ್ಮೆಂಟ್ ಸೊಸೈಟಿ)ಯ ಕನಸಿನ ಯೋಜನೆ ಈ ಬಾನುಲಿ ಕೇಂದ್ರವಾಗಿದೆ. ಈ ಒಂದು ವರ್ಷದ ಪಯಣದಲ್ಲಿ ಲಕ್ಷಾಂತರ ಕೇಳುಗರ ಹೃನ್ಮನಗಳನ್ನು ರೇಡಿಯೋ ತಲುಪಿದೆ. ದಿನದ 24 ತಾಸೂ ರೇಡಿಯೋ ಪ್ರಸಾರವಾಗುತ್ತಿರುವುದು ವಿಶೇಷವಾಗಿದೆ. ರೇಡಿಯೋ ಶಿವಮೊಗ್ಗ ಆಪ್ ನ ಮುಖಾಂತರ ಜಗತ್ತಿನಾದ್ಯಂತ 176 ರಾಷ್ಟ್ರಗಳಲ್ಲಿ ಕೇಳುಗ ವಲಯವನ್ನು ವಿಸ್ತರಿಸಿಕೊಂಡಿರುವುದು ನಮ್ಮ ರೇಡಿಯೋದ ಹೆಮ್ಮೆಯಾಗಿದೆ. ಕೇಳುಗರ ವಿನಂತಿಯ ಮೇರೆಗೆ, ಅನೇಕಾನೇಕ ಕಾರ್ಯಕ್ರಮಗಳನ್ನು ರೂಪಿಸುತ್ತಾ ಸಮುದಾಯ ಬಾನುಲಿಯಾಗಿ ತನ್ನ ಛಾಪು ಮೂಡಿಸುತ್ತಿರುವುದು ಸಂತಸ ತಂದಿದೆ ಎಂದರು.
ಸಾಂಪ್ರದಾಯಿಕ ಶಿಕ್ಷಣ ವ್ಯವಸ್ಥೆಯ ಹೊರತಾದ ಸಮಗ್ರ ಶಿಕ್ಷಣವನ್ನು ನಮ್ಮ ಬಾನುಲಿ ಕೇಂದ್ರ ಗುರುತಿಸಿ, ಕಾರ್ಯಕ್ರಮಗಳನ್ನು ರೂಪಿಸುತ್ತದೆ. ಶಿಕ್ಷಣ ಎಂಬುದನ್ನು ಇಲ್ಲಿ ಮೂರು ಸ್ತರದಲ್ಲಿ ನಾವು ನೋಡುತ್ತಿದ್ದೇವೆ. ಮೊದಲನೆಯದಾಗಿ ಶಾಲಾ ಶಿಕ್ಷಣದ ಹಂತ, ಎರಡನೆಯದಾಗಿ ಉನ್ನತ ಶಿಕ್ಷಣದ ಹಂತ, ಮೂರನೆಯದಾಗಿ ಸಮುದಾಯ ಶಿಕ್ಷಣದ ಹಂತ. ನಮ್ಮೆಲ್ಲ ಕಾರ್ಯಕ್ರಮಗಳ ಒಟ್ಟೂ ಉದ್ದೇಶ ಹೀಗೆ ಮೂರು ಹಂತದಲ್ಲಿ ಶಿಕ್ಷಣವನ್ನು ನೀಡಿ, ಸುಸ್ಥಿರ ಬದುಕಿಗೆ ವೇದಿಕೆಯನ್ನಾಗಿ ರೂಪಿಸಿ, ಭರವಸೆಯ ಭವಿಷ್ಯಕ್ಕಾಗಿ ಬಾನುಲಿಯಲ್ಲಿ ಕಾರ್ಯಕ್ರಮಗಳನ್ನು ನೀಡುವುದಾಗಿದೆ ಎಂದಿದ್ದಾರೆ.

ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ವಿವಿಧ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗುತ್ತಿದೆ. ಕೃಷಿ, ಅರಣ್ಯ, ತೋಟಗಾರಿಕೆ, ಪಶುಸಂಗೋಪನೆ, ವಾಣಿಜ್ಯ, ಶಿಕ್ಷಣ, ಕಲೆ, ಸಂಸ್ಕೃತಿ, ಸ್ಥಳೀಯ ಭಾಷೆಗಳು, ಪರಿಸರ, ಗುಡಿಕೈಗಾರಿಕೆ, ಬ್ಯಾಂಕಿಂಗ್, ಆರೋಗ್ಯ, ಕೈಗಾರಿಕೆ, ಸೇವಾ ಕ್ಷೇತ್ರ, ಡಿಜಿಟಲ್ ತಂತ್ರಜ್ಞಾನ ಇನ್ನಿತರ ವಿಷಯಾಧಾರಿತ ಕಾರ್ಯಕ್ರಮಗಳನ್ನು ಜನರಿಗೆ ನೀಡುತ್ತಿದೆ. ಶ್ರವಣ ಮಾಧ್ಯಮದ ಎಲ್ಲಾ ಸಾಧ್ಯತೆಗಳನ್ನೂ ಒಳಗೊಳ್ಳುವುದು ನಮ್ಮ ಆಶಯವಾಗಿದೆ. ನಮ್ಮ ಆಪ್‌ ನ ಪಾಡ್‌ಕಾಸ್ಟ್ ಮೂಲಕ ಮುಖ್ಯ ಕಾರ್ಯಕ್ರಮಗಳ ಆಡಿಯೋವನ್ನು ಕೇಳುಗರು ತಮಗೆ ಬೇಕೆಂದಾಗ ಮತ್ತೆ ಮತ್ತೆ ಕೇಳಿಸಿಕೊಳ್ಳುವ ಅವಕಾಶವನ್ನು ರೇಡಿಯೋ ಶಿವಮೊಗ್ಗ ಎಫ್.ಎಂ. ಒದಗಿಸುತ್ತದೆ ಎಂದಿದ್ದಾರೆ.
ಒಂದು ವರ್ಷದ ಸವಿ ಸಂದರ್ಭಕ್ಕೆಂದು ಆಹ್ವಾನಿತ ಶ್ರೋತೃಗಳು, ಗಣ್ಯಮಾನ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ಸಮ್ಮುಖದಲ್ಲಿ ರೇಡಿಯೋ ಹಬ್ಬವನ್ನು ಆಯೋಜಿಸಲಾಗಿದೆ. ಇವರಿಂದ ವರ್ಷದ ಹಿನ್ನೋಟ, ಪ್ರತಿಸ್ಫಂದನೆ ಹಾಗೂ ಮುಂದಿನ ಕಾರ್ಯಕ್ರಮಗಳ ರೂಪುರೇಷೆಗಳನ್ನು ಒಗ್ಗೂಡಿಸುವ ಚಿಂತನ – ಮಂಥನ ಇದಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಬೃಹತ್ ಮಟ್ಟದಲ್ಲಿ ಆಯೋಜಿಸುವ ಚಿಂತನೆ ಇದೆ. ಇದಕ್ಕೆ ನಮ್ಮೆಲ್ಲ ಕೇಳುಗರ, ಹಿತೈಷಿಗಳ ಸಹಕಾರ ಮಾರ್ಗದರ್ಶನವೇ ಮುಖ್ಯವಾಗಿದೆ. ಜನ ಸಮುದಾಯಗಳು ಅಪೇಕ್ಷಿಸಿದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲೂ ರೂಪಿಸಲಾಗುವುದು ಎಂದರು.

Also read: ಗ್ಯಾಂಗ್’ಸ್ಟರ್ ಅತೀಕ್ ಅಹ್ಮದ್ ಸಮಾಧಿ ಮೇಲೆ ರಾಷ್ಟ್ರಧ್ವಜ: ಕಾಂಗ್ರೆಸ್ ನಾಯಕನ ಬಂಧನ

ನಮ್ಮ ರೇಡಿಯೋ ಶಿವಮೊಗ್ಗದ ಒಂದು ವರ್ಷದ ಪಯಣದಲ್ಲಿ ಅನೇಕ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿದೆ. ಶಿಕ್ಷಣ ತಜ್ಞರು, ಪರಿಸರ ವಿಜ್ಞಾನಿಗಳು, ಜನಪದ ತಜ್ಞರು, ರೈತವಿಜ್ಞಾನಿಗಳು ನಿರಂತರವಾಗಿ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ. ಶಿಕ್ಷಣ ಇಲಾಖೆ ಸಹಯೋಗದಲ್ಲಿ ಎಸ್ ಎಸ್ ಎಲ್ ಸಿ ಪಾಠಗಳು, ಶಿಕ್ಷಕರಿಗೆ ಅಗತ್ಯವಾದ ವಿದ್ಯಾಗಮ ಆನ್ ಲೈನ್ ತರಬೇತಿ ಕಾರ್ಯಕ್ರಮಗಳು ನಮ್ಮ ರೇಡಿಯೋದಲ್ಲಿ ಬಿತ್ತರವಾಗಿದೆ. ವಿಶೇಷವಾಗಿ ರೇಡಿಯೋ ಮುಖಾಂತರ ಬದುಕಿಗಾಗಿ ರಂಗಪಾಠಗಳನ್ನು ಬಿತ್ತರಿಸುತ್ತಾ,ಅಭಿನಯದ ಕುರಿತಾಗಿ ದೂರಶಿಕ್ಷಣದ ಸರ್ಟಿಫಿಕೇಟ್ ಕೋರ್ಸ್ ನ್ನು ನಡೆಸಲಾಗಿದೆ. ವಿವಿಧ ದಿನಾಚರಣೆಗಳಿಗೆ ಕೂಡಾ ಕಾರ್ಯಕ್ರಮಗಳನ್ನು ನಡೆಸಿದೆ. ವೈದ್ಯರ ಸಂದರ್ಶನ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠರು, ಶಾಸಕರು, ಮಹಾಪೌರರ ಜೊತೆಗೆ ನೇರಪ್ರಸಾರದ ಸಂವಾದ ನಡೆಸಲಾಗಿದೆ. ತೃತೀಯ ಲಿಂಗಿ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ, ಹಿರಿಯ ಚಲನಚಿತ್ರ ಕಲಾವಿದ ರಮೇಶ್ ಭಟ್ ಅವರೊಂದಿಗೆ ಸಂದರ್ಶನ ನಡೆಸಲಾಗಿದೆ. ಪಂಚಾಯತ್ ರಾಜ್ ಸಚಿವಾಲಯದ ಸಹಯೋಗದೊಂದಿಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಯ ವ್ಯಾಪ್ತಿಯ ಜನರ ಆರೋಗ್ಯ ಮತ್ತು ನೈರ್ಮಲ್ಯದ ಕುರಿತಾದ ವಿಶೇಷ ಕಾರ್ಯಕ್ರಮಗಳು ಕೂಡಾ ಪ್ರಸಾರವಾಗುತ್ತಿದೆ. ದೇಶದ ಚಾರಿತ್ರಿಕ ಪುಟದಲ್ಲಿ ಸದಾ ರಾರಾಜಿಸುವ ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಬರಹಗಳು- ಚಿಂತನೆಗಳನ್ನು ಪ್ರತಿದಿನ ರೇಡಿಯೋದಲ್ಲಿ ಪ್ರಸಾರ ಮಾಡುತ್ತಿರುವುದು ಮತ್ತೊಂದು ಸಂತಸದ ಸಂಗತಿಯಾಗಿದೆ.

ಜಿ.ಎಲ್. ಜನಾರ್ದನ್, ನಿಲಯದ ನಿರ್ದೇಶಕರು, ರೇಡಿಯೋ ಶಿವಮೊಗ್ಗ 90.8 ಎಫ್ ಎಂ. ಶಿವಮೊಗ್ಗ
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share205Tweet123Send
Previous Post

ಗ್ಯಾಂಗ್’ಸ್ಟರ್ ಅತೀಕ್ ಅಹ್ಮದ್ ಸಮಾಧಿ ಮೇಲೆ ರಾಷ್ಟ್ರಧ್ವಜ: ಕಾಂಗ್ರೆಸ್ ನಾಯಕನ ಬಂಧನ

Next Post

ಎ.28ರಿಂದ ಮೇ 7ರವರೆಗೂ ರಾಜ್ಯದಲ್ಲಿ ಪ್ರಧಾನಿ ಮೋದಿ 7 ದಿನ ಪ್ರಚಾರ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕಾರ್ಯವೈಖರಿಗೆ ಪ್ರಧಾನಿ ಮೆಚ್ಚುಗೆ

ಎ.28ರಿಂದ ಮೇ 7ರವರೆಗೂ ರಾಜ್ಯದಲ್ಲಿ ಪ್ರಧಾನಿ ಮೋದಿ 7 ದಿನ ಪ್ರಚಾರ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಪರಪ್ಪನ ಅಗ್ರಹಾರದ ಕ್ವಾರಂಟೈನ್‌ ಸೆಲ್‌’ಗೆ ಶಾಸಕ ವಿನಯ್ ಕುಲಕರ್ಣಿ

April 18, 2026
ಜೆಎನ್’ಎನ್’ಸಿಇ ಪಿಜಿ ಗ್ರಾಜುಯೇಷನ್ ಡೇ | ಎನ್ಇಎಸ್ ಚಿನ್ನದ ಪದಕ ಪ್ರದಾನ

ಜೆಎನ್’ಎನ್’ಸಿಇ ಪಿಜಿ ಗ್ರಾಜುಯೇಷನ್ ಡೇ | ಎನ್ಇಎಸ್ ಚಿನ್ನದ ಪದಕ ಪ್ರದಾನ

April 18, 2026
ಯುದ್ಧ ವಿಮಾನ ತುರ್ತು ಭೂಸ್ಪರ್ಶ: ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ

ಯುದ್ಧ ವಿಮಾನ ತುರ್ತು ಭೂಸ್ಪರ್ಶ: ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ

April 18, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಗಂಟಲಲ್ಲಿ ಆಹಾರ ಸಿಲುಕಿಕೊಂಡು ಯುವಕ ಸಾವು

April 18, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL