ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.27 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು #Job Fair ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಶಾಹಿ ಎಕ್ಸ್‌ಪೋರ್ಟ್, #Shahi Export ಅಪೋಲೋ ಫಾರ್ಮಸಿ, #Apollo Pharmacy ಮಹಾಂತ್ ಮೋಟಾರ್ಸ್ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಯಾರೆಲ್ಲಾ ಪಾಲ್ಗೊಳ್ಳಬಹುದು?
ಎಸ್’ಎಸ್’ಎಲ್’ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವAತೆ ಉದ್ಯೋಗಾಧಿಕಾರಿಗಳು ತಿಳಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















