ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಐಸಿಸಿ, ಅಲ್ ಖೈದಾದಂತಹ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ಉಗ್ರರು ಶಿವಮೊಗ್ಗದಲ್ಲಿ ಪತ್ತೆಯಾಗಿರುವುದು ದಿಗ್ಬö್ರಮೆ ಉಂಟಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಆತಂಕ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಹಾಗೂ ತೀರ್ಥಹಳ್ಳಿ ಮೂಲದ ಇಬ್ಬರು ಶಂಕಿತ ಉಗ್ರರನ್ನು ನಿನ್ನೆ ಪೊಲೀಸರು ಬಂಧಿಸಿದ್ದು, ಇನ್ನೊಬ್ಬನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಶಾಂತಿಗೆ ಹೆಸರಾದ ಮಲೆನಾಡಿನಲ್ಲಿ ಇಂತಹ ಘಟನೆ ನಡೆದಿರುವುದು, ನಮ್ಮ ಜಿಲ್ಲೆಯಲ್ಲಿ ಶಂಕಿತ ಉಗ್ರರು ಪತ್ತೆಯಾಗಿರುವುದು ಆತಂಕಕಾರಿ ವಿಚಾರವಾಗಿದೆ ಎಂದಿದ್ದಾರೆ.

Also read: ಬಾಂಬ್ ತಯಾರಿಸಿ ತುಂಗಾ ನದಿಗೆ ಎಸೆಯುತ್ತಿದ್ದ ಶಂಕಿತ ಉಗ್ರರು, ಗುರುಪುರದಲ್ಲಿ ಬ್ಲಾಸ್ಟ್’ಗೆ ಸಂಚು?











Discussion about this post