ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಹಾಗೂ ಐಸಿಎಸ್ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದಲ್ಲಿ ಮೂವರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.
ತೀರ್ಥಹಳ್ಳಿಯ ಶಾರೀಕ್, ಮಂಗಳೂರು ಮೂಲದ ಮಾಜ್ ಮುನೀರ್ ಹಾಗೂ ಅಹಮ್ಮದ್ ಸೈಯ್ಯದ್ ಎನ್ನುವವರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ 9 ದಿನ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಸೆ.19ರಂದು ಇವರನ್ನು ಬಂಧಿಸಲಾಗಿದ್ದು, ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಸೇರಿದಂತೆ ಹಲವು ಕಡೆ ಕೋಮು ಗಲಭೆಯಲ್ಲಿ ಇವರ ಪಾತ್ರ ಇದೆ ಎಂದು ಹೇಳಲಾಗಿದ್ದು, ಐಸಿಎಸ್‌ನೊಂದಿಗೆ ನೇರ ಸಂಪರ್ಕ ಹೊಂದಿದ್ದು, ಸ್ಪೋಟಕಗಳ ತರಬೇತಿಯನ್ನು ಸಹ ಪಡೆದಿದ್ದಾರೆ ಎಂದು ಹೇಳಲಾಗಿದೆ.
Also read: ಬಾವಿಯಲ್ಲಿ ದೊರೆತ ಮಗುವಿಗೆ ಮಿಮ್ಸ್ ನಲ್ಲಿ ಚಿಕಿತ್ಸೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















