ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ವೈದ್ಯರ ದಿನಾಚರಣೆಯ ಅಂಗವಾಗಿ ನಗರದ (SIMS) ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವೈದ್ಯಾಧಿಕಾರಿಗಳು ಹಾಗೂ ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ವೈದ್ಯಕೀಯ ಅಧೀಕ್ಷ ಡಾ.ಶ್ರೀಧರ್, ಜಿಲ್ಲಾ ಸರ್ಜನ್ ಡಾ.ಸಿದ್ದನಗೌಡ, ಡಾ.ಪ್ರವೀಣ್ ಮತ್ತು ಡಾ.ಮಂಜುನಾಥ್ ರವರನ್ನು ಶಿವಮೊಗ್ಗ ಜಿಲ್ಲಾ ಕೊರೋನಾ ಲಸಿಕಾ ಅಭಿಯಾನ ಪ್ರಮುಖ್ ಹಾಗೂ KSSIDC ಯ ಉಪಾಧ್ಯಕ್ಷ ಎಸ್ ದತ್ತಾತ್ರಿ ಗೌರವಿಸಿ, ಸನ್ಮಾನಿಸಿದರು.
ಕೊರೋನಾ ನಿರ್ಮೂಲನೆಗೆ ಕೇಂದ್ರ ಬಿಂದುವಾಗಿ ಅತಿ ಹೆಚ್ಚು ಪರಿಶ್ರಮಿಸುತ್ತಿರುವ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ವೈದ್ಯಾಧಿಕಾರಿಗಳು, ವೈದ್ಯರು, ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನು ಕೃತಜ್ಞತಾ ರೂಪವಾಗಿ ಅವರನ್ನು ಈ ಕಾರ್ಯಕ್ರಮದ ಮೂಲಕ ಅಭಿನಂದಿಸಲಾಯಿತು.
ಈ ಸಂಧರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದೀನದಯಾಳ್, ಮಾಜಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ ಜ್ಞಾನೇಶ್ವರ್, ಲಸಿಕಾ ಅಭಿಯಾನದ ನಗರ ಪ್ರಮುಖ್ ನವಲೆ ಮಂಜುನಾಥ್, ಮಾಜಿ ಮೇಯರ್ ಸುವರ್ಣ ಶಂಕರ್, ನಾಗರಾಜ್, ಡಾ.ತಾನಾಜಿ, ಮಹೇಶ್ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post