ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆನವಟ್ಟಿ ಠಾಣೆಯ ಎಎಸ್’ಐ ಬಸವರಾಜಪ್ಪ(50) ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.
ಕಳೆದ ಏಪ್ರಿಲ್ 30, 2025 ರ ರಾತ್ರಿ ಬಸವರಾಜಪ್ಪ ಅವರು ಬೈಕ್ ನಲ್ಲಿ ಶಿರಾಳಕೊಪ್ಪಕ್ಕೆ ಆಗಮಿಸುತ್ತಿದ್ದ ವೇಳೆ, ವಾಹನವೊಂದು ಡಿಕ್ಕಿ ಹೊಡೆದಿತ್ತು.
ಗಂಭೀರವಾಗಿ ಗಾಯಗೊಂಡಿದ್ದ ಅವರಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕೋಮಾ ಸ್ಥಿತಿಯಲ್ಲಿದ್ದ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಶಿಕಾರಿಪುರ ಪಟ್ಟಣದಲ್ಲಿರುವ ಮನೆಗೆ ಕರೆ ತರಲಾಗಿತ್ತು. ಆದರೆ ಜು. 5 ರಂದು ಅವರು ವಿಧಿವಶರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಸಂತಾಪ
ಎಎಸ್‌ಐ ಬಸವರಾಜಪ್ಪ ಅವರ ನಿಧನಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post