No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಭೆಗೆ ಗೈರು ಹಾಜರಾಗಿರುವ ವೈದ್ಯರಿಗೆ ಕಾರಣ ಕೇಳಿ ನೋಟೀಸ್ ಜಾರಿ: ಸಚಿವ ಈಶ್ವರಪ್ಪ

kalpa News by kalpa News
May 3, 2021
in ಶಿವಮೊಗ್ಗ
0
ನಾಳೆ ರಾತ್ರಿ 9 ಗಂಟೆಗೆ ದೀಪ ಬೆಳಗಿಸುವುದರ ಕುರಿತು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಜಿಲ್ಲೆಯಲ್ಲಿ ನಿಯಂತ್ರಣ ಮೀರಿ ಹರಡುತ್ತಿರುವ ಮಾರಣಾಂತಿಕ ಕೊರೋನ ಸೋಂಕನ್ನು ನಿಯಂತ್ರಿಸುವಲ್ಲಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಆರೋಗ್ಯ ಇಲಾಖೆಯ ಸಮಸ್ತ ಸಿಬ್ಬಂದಿಗಳೊಂದಿಗೆ ಹಗಲಿರುಳು ಶ್ರಮಿಸುತ್ತಿರುವ ಈ ಸಂದರ್ಭದಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ವರ್ತನೆ ಅಕ್ಷಮ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.

ಅವರು ಇಂದು ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಸಿಮ್ಸ್ ಆಡಳಿತಾಧಿಕಾರಿಗಳು, ಕೊರೋನ ನಿಯಂತ್ರಣ ಕಾರ್ಯದಲ್ಲಿ ನಿರತವಾಗಿರುವ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡುತ್ತಿದ್ದರು. ಮಹತ್ವದ ಸಭೆಗೆ ಗೈರುಹಾಜರಾಗಿರುವ ವೈದ್ಯರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡುವಂತೆ ಹಾಗೂ ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆಯಾದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸಿಮ್ಸ್ ಆಡಳಿತಾಧಿಕಾರಿಗಳಿಗೆ ತಿಳಿಸಿದರು.

ಶಿಫ್ಟ್ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುವ ಡಿ.ಗ್ರೂಫ್, ನರ್ಸ್ ಮತ್ತು ಇತರೆ ವಿಭಾಗಗಳ ಸಿಬ್ಬಂದಿಗಳ ಹಾಜರಾತಿಯನ್ನು ಸಂಬಂಧಿಸಿದ ಅಧಿಕಾರಿಗಳು ಗಮನಿಸಬೇಕು. ಸಕಾಲದಲ್ಲಿ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿಗಳ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದ ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಕಾರ್ಯಕ್ಕಾಗಿ ಬಳಕೆಯಾಗುತ್ತಿರುವ ಸಿಬ್ಬಂಧಿಗಳು, ಲಭ್ಯವಿರುವ ಲಸಿಕೆ, ಹಾಸಿಗೆಗಳು, ಕೋರೋನವಲ್ಲದೇ ಇತರೆ ಕಾಯಿಲೆಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸುವ ರೋಗಿಗಳ ಚಿಕಿತ್ಸೆಗೆ ಕೈಗೊಂಡಿರುವ ಕ್ರಮಗಳ ಕುರಿತು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.

ಈ ಸಭೆಯಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಮಾತನಾಡಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ಕೋವಿಡ್ ಸೋಂಕಿತರನ್ನು ನೋಡಲು ಆಗಮಿಸುವ ಸಂಬಂಧಿಕರು ರೋಗಿಯನ್ನು ನೋಡಲು ಹೋಗುವ ವ್ಯಕ್ತಿ ಪಿ.ಪಿ.ಕಿಟ್ ಧರಿಸುವುದು ಕಡ್ಡಾಯವಾಗಿದೆ. ದಿನಕ್ಕೆ 3-4ಬಾರಿ ರೋಗಿಯನ್ನು ಸಂದರ್ಶಿಸುವ ವ್ಯಕ್ತಿ ಪ್ರತಿಬಾರಿಯೂ ಪಿ.ಪಿ.ಕಿಟ್ ಹೊಸದನ್ನು ಖರೀದಿಸಿ, ಧರಿಸುವುದು ಸಾಧ್ಯವೇ?. ಈ ಪಿ.ಪಿ.ಕಿಟ್‌ಗಳು ಸುಲಭ ಬೆಲೆಯಲ್ಲಿ ದೊರೆಯುವುದಾದರೂ ಎಲ್ಲಿ? ಅಥವಾ ಒಮ್ಮೆ ಬಳಕೆದಾದ ಕಿಟ್‌ಗಳೇ ಮತ್ತೆಮತ್ತೆ ಬಳಕೆಯಾಗುತ್ತಿವೆಯೇ?. ಇದರಿಂದಾಗಿ ಸೋಂಕು ಇನ್ನಷ್ಟು ಹರಡುವ ಆತಂಕವಿದೆ. ಆದ್ದರಿಂದ ಸಾರ್ವಜನಿಕರಿಗೆ ಈ ಕಿಟ್‌ಗಳು ಸರಳವಾಗಿ, ಸುಲಭ ಬೆಲೆಯಲ್ಲಿ ದೊರೆಯುವಂತೆ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ವೈದ್ಯಕೀಯ ಸಂಸ್ಥೆಯ ಆಡಳಿತಾಧಿಕಾರಿಗಳು, ನಿರ್ದೇಶಕರು ಹಾಗೂ ವೈದ್ಯಾಧಿಕಾರಿಗಳು ಇಂದು ಸಂಜೆ ಸಭೆ ಸೇರಿ ತುರ್ತು ಮತ್ತು ಅಗತ್ಯ ನಿರ್ಣಯವನ್ನು ಕೈಗೊಂಡು ಮಾಹಿತಿ ನೀಡುವಂತೆ ಹಾಗೂ ಸರಳವಾಗಿ ಜನಸಾಮಾನ್ಯರಿಗೆ ಕಿಟ್‌ಗಳು ದೊರೆಯುವಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದರು.

ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರು ಹಾಗೂ ಚಿಕಿತ್ಸೆಗೆ ದಾಖಲಾದ ರೋಗಿಗಳಿಗೆ ಊಟೋಪಹಾರ ಮತ್ತು ಅಗತ್ಯ ಸಹಕಾರ ಒದಗಿಸಲು ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ಮುಂದಾಗಿದ್ದು, ಆ ಸಂಸ್ಥೆಗಳು ಇನ್ನೂ ಒಂದೆರೆಡು ದಿನದಲ್ಲಿ ಕಾರ್ಯಾರಂಭ ಮಾಡಲಿವೆ. ಅವರಿಗೆ ಸಿಮ್ಸ್ ಆಡಳಿತ ಮಂಡಳಿ ಅಗತ್ಯ ಸಹಕಾರ ನೀಡುವಂತೆ ಅವರು ಸೂಚಿಸಿದರು.

ಆರೋಗ್ಯ ಸೇವೆಗೆ ರಾಜ್ಯದಲ್ಲಿಯೇ ಮೆಗ್ಗಾನ್ ಆಸ್ಪತ್ರೆಗೆ ಉತ್ತಮ ಹೆಸರಿದೆ. ಅದಕ್ಕೆ ಕಪ್ಪುಚುಕ್ಕೆ ಬರದಂತೆ ಆರೋಗ್ಯ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು ಕಾರ್ಯನಿರ್ವಹಿಸುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್, ರುದ್ರೇಗೌಡ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ರಾಜ್ಯ ಅಧ್ಯಕ್ಷ ಡಿ.ಎಸ್.ಅರುಣ್, ಸಿಮ್ಸ್ ಆಡಳಿತಾಧಿಕಾರಿ ಡಾ. ಎಸ್.ಓ.ಸಿದ್ಧಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ, ಜಿಲ್ಲಾ ಸರ್ಜನ್ ಡಾ. ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CoronaKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMinister EshwarappaNewsinKannadaNewsKannadaShimogaShivamoggaShivamogga Newsಕೊರೋನಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಕೆ.ಎಸ್.ಈಶ್ವರಪ್ಪ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉಳ್ಳಿ ಫೌಂಡೇಷನ್‌ನಿಂದ ಪೊಲೀಸ್ ಸಿಬ್ಬಂದಿಗಳಿಗೆ ಮಾಸ್ಕ್ ವಿತರಣೆ

Next Post

ಆಕ್ಸಿಜನ್ ಕೊರತೆ: 24 ಜನ ಕೊರೋನಾ ಸೋಂಕಿತರ ಸಾವು: ತನಿಖೆಗೆ ಆದೇಶ

kalpa News

kalpa News

Next Post
ಕೃತಕ ಆಕ್ಸಿಜನ್ ಮಾರಾಟ: ಪ್ರಕರಣ ದಾಖಲು

ಆಕ್ಸಿಜನ್ ಕೊರತೆ: 24 ಜನ ಕೊರೋನಾ ಸೋಂಕಿತರ ಸಾವು: ತನಿಖೆಗೆ ಆದೇಶ

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL