ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಕರ್ತವ್ಯನಿರತ ವೈದ್ಯಾಧಿಕಾರಿ ಡಾ.ವೆಂಕಟೇಶ್ ಅವರ ಮೇಲಿನ ಹಲ್ಲೆಗೆ ಕೆಪಿಸಿಸಿ ವೈದ್ಯರ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಪ್ರದೀಪ್ ಡಿಮೆಲ್ಲೋ ಖಂಡನೆ ವ್ಯಕ್ತಪಡಿಸಿದ್ದಾರೆ.
ವೈದ್ಯರು ತಮ್ಮ ಪ್ರಾಣದ ಹಂಗು ತೊರೆದು ಮನುಷ್ಯರ ಪ್ರಾಣ ಉಳಿಸಲು ಶ್ರಮಿಸುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೇ ಅನೇಕರ ಪ್ರಾಣವನ್ನು ಕಾಪಾಡಿದ್ದಾರೆ. ಇಂತಹ ವೈದ್ಯರ ಮೇಲೆ ಹಲ್ಲೆ ನಡೆಸಿರುವುದು ಇಡೀ ವೈದ್ಯ ಸಮೂಹಕ್ಕೆ ನೋವುಂಟಾಗಿದೆ ಎಂದು ಡಾ.ಪ್ರದೀಪ್ ಪತ್ರಿಕಾ ಹೇಳಿಕೆ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.
Also read: ವಿದ್ಯೆ ಕಲಿಸಬೇಕಾದ ಸರ್ಕಾರಿ ಶಾಲೆ ಶಿಕ್ಷಕಿ ಮನೆಯಲ್ಲೇ ನಡೆಸುತ್ತಿದ್ದ ಅಸಹ್ಯ ಕೃತ್ಯ | ಆಕೆ ಈಗ ಕಂಬಿ ಹಿಂದೆ
ಸರ್ಕಾರ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ಕಠಿಣ ಕಾನೂನುಗಳನ್ನು ಜಾರಿಗೊಳಿಸಬೇಕು. ಹಾಗೂ ಚಿಕ್ಕಮಗಳೂರಿನಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದವರಿಗೆ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಸಮಾಜಕ್ಕೆ ಸಂದೇಶ ರವಾನಿಸಬೇಕು ಎಂದು ಡಾ.ಪ್ರದೀಪ್ ಡಿಮೆಲ್ಲೊ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post