No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ಬಿ ಎಸ್ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಪಿಇಎಸ್‌ನಲ್ಲಿ ಬೃಹತ್ ರಕ್ತದಾನ ಶಿಬಿರ

kalpa News by kalpa News
February 28, 2026
in ಶಿವಮೊಗ್ಗ
0
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಕ್ತದಾನ ಶ್ರೇಷ್ಠದಾನಗಳಲ್ಲಿ ಒಂದು. ರಕ್ತಕ್ಕೆ ಪರ್ಯಾಯವಿಲ್ಲ. ಇದನ್ನು ದಾನಿಗಳಿಂದ ಮಾತ್ರ ಸ್ವೀಕರಿಸಬಹುದು. ರಕ್ತದಾನ ಮಾಡುವುದರಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು ಎಂದು ಪಿಇಎಸ್ ಟ್ರಸ್ಟ್‌ನ ಕುಲಸಚಿವ ಡಾ. ನಾಗರಾಜ ಹೇಳಿದರು.

ಪಿಇಎಸ್ ಸಂಸ್ಥೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರ #B S Yadiyurappa ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ #Blood donation camp ಅವರು ಮಾತನಾಡಿದರು
ರಕ್ತದಾನ ಮಾಡುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇಂದು 15 ಮಿಲಿಯನ್ ಯುನಿಟ್ ರಕ್ತದ ಬೇಡಿಕೆ ಇದೆ. ರಕ್ತದ ಕೊರತೆಯಿಂದ ಬಳಲುವ ರೋಗಿಗಳು, ಅಪಘಾತ, ಗರ್ಭಿಣಿ ಸ್ತ್ರೀಯರಿಗೆ, ಶಸ್ತ್ರಚಿಕಿತ್ಸೆಗೆ ಹೀಗೆ ಮೊದಲಾದ ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಇದ್ದು ಭಾರತದಲ್ಲಿ ರಕ್ತದಾನಿಗಳ ಸಂಖ್ಯೆಯು ತೀರಾ ಕಡಿಮೆ ಇದೆ. ಆದ್ದರಿಂದ ರಕ್ತದಾನದ ಮಹತ್ವ ಕುರಿತು ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದು ತಿಳಿಸಿದರು.

ಬಿ ಎಸ್ ಯಡಿಯೂರಪ್ಪ ಅವರ ಕೊಡುಗೆ ಮತ್ತು ಸಾಧನೆಯ ಮೈಲುಗಲ್ಲುಗಳ ಮೇಲೆ ಬೆಳಕು ಚೆಲ್ಲಿದರು. ರೆಡ್ ಕ್ರಾಸ್ ಸಂಜೀವಿನಿ ರಕ್ತನಿಧಿಯ ಧರಣೇಂದ್ರ ದಿನಕರ್ ಅವರು ಮಾತನಾಡುತ್ತಾ ಒಬ್ಬ ವ್ಯಕ್ತಿಯ ದೇಹದಲ್ಲಿ ೫ ರಿಂದ ೬ ಲೀಟರ್ ರಕ್ತವಿದ್ದು ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತವು ಉತ್ಪತ್ತಿ ಆಗುತ್ತದೆ. ದೇಹದಲ್ಲಿನ ಕೊಬ್ಬಿನ ಅಂಶವು ಕಡಿಮೆಯಾಗುತ್ತದೆ. ನಿಯಮಿತವಾಗಿ ರಕ್ತದಾನ ಮಾಡುವ ದಾನಿಗಳಿಗೆ ಹೃದಯ ಸಮಸ್ಯೆ, ಸಕ್ಕರೆ ಕಾಯಿಲೆ ಮೊದಲಾದ ಕಾಯಿಲೆಗಳು ಬರುವ ಸಾಧ್ಯತೆ ಕಡಿಮೆ ಆದ್ದರಿಂದ ರಕ್ತದಾನ ಮಾಡುವುದರ ಮೂಲಕ ನೆರವಾಗಬೇಕೆಂದು ನುಡಿದರು.
ಸಹ್ಯಾದ್ರಿ ನಾರಾಯಣ ಹೃದಯಾಲಯದ ವೈದ್ಯಾಧಿಕಾರಿ ಡಾ. ರೇಖಾ ಅವರು ಮಾತನಾಡಿ, ವಿದ್ಯಾರ್ಥಿಗಳು ವರ್ಷಕ್ಕೆ ಎರಡರಿಂದ ಮೂರು ಬಾರಿ ರಕ್ತದಾನ ಮಾಡುವುದರಿಂದ ಮಾನಸಿಕ ಒತ್ತಡವು ಕಡಿಮೆಯಾಗುತ್ತದೆ. ಜ್ಞಾಪಕ ಶಕ್ತಿಯು ವೃದ್ಧಿಸುತ್ತದೆ. ರಕ್ತದಾನ ಮಾಡಿದ 48 ಗಂಟೆಗಳಲ್ಲಿ ರಕ್ತವು ಪುನರ್ ಉತ್ಪತ್ತಿಯಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ಆತಂಕ ಪಡದೆ ರಕ್ತದಾನವನ್ನು ಮಾಡಬಹುದು ಎಂದು ಕಿವಿ ಮಾತನ್ನು ಹೇಳಿದರು.

ಪಿಇಎಸ್ ಐಟಿಎಂ, ಪಿಇಎಸ್ ಐಎಎಮ್‌ಎಸ್, ಪಿಇಎಸ್ ಪಾಲಿಟೆಕ್ನಿಕ್‌ನ ವಿದ್ಯಾರ್ಥಿಗಳು ಹಾಗೂ ಪಿಇಎಸ್ ಟ್ರಸ್ಟ್‌ನ ಅಡಿಯಲ್ಲಿ ಬರುವ ಎಲ್ಲಾ ಸಂಸ್ಥೆಗಳ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ರಕ್ತದಾನವನ್ನು ಮಾಡಿದರು.

ಸಮಾರಂಭದಲ್ಲಿ ಪಿಇಎಸ್ ಐಟಿಎಂನ ಪ್ರಾಂಶುಪಾಲರಾದ ಡಾ. ಸ್ವಾಮಿ ಡಿ ಆರ್. ಪಿಇಎಸ್ ಐಎಎಮ್‌ಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ ಸುದರ್ಶನ್ ಜಿ ಎಂ. ಪಿಇಎಸ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಸುಜಯ್ .ಎಂ. ವಿ, ಪಿಇಎಸ್ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲ ಸೋಮಶೇಖರಯ್ಯ, ಪಿಇಎಸ್ ಐಟಿಎಂನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಶಿವಾನಂದ ಸಿ ಮರಡಿ, ಪಿಇಎಸ್ ಐಎಎಮ್‌ಎಸ್‌ನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಭವ್ಯ ವಿ, ರೆಡ್‌ಕ್ರಾಸ್ ಕಾರ್ಯಕ್ರಮಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಪಿಇಎಸ್ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರುಗಳು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಭಾಗವಹಿಸಿದ್ದರು. ಶಿವಮೊಗ್ಗದ ರೋಟರಿ ರಕ್ತನಿಧಿಯ ಸಂಸ್ಥೆ ಹಾಗೂ ಸಹ್ಯಾದ್ರಿ ನಾರಾಯಣ ಹೃದಯಾಲಯದ ಸಿಬ್ಬಂದಿ ವರ್ಗದವರು ರಕ್ತದಾನ ಶಿಬಿರವನ್ನು ನೆರವೇರಿಸಿಕೊಟ್ಟರು. ಒಟ್ಟು 105 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ. ಎನ್ ಪ್ರವೀಣ್ ಚಂದ್ರ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: B S YadiyurappBlood donation campKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಬಿ.ಎಸ್. ಯಡಿಯೂರಪ್ಪಬೃಹತ್ ರಕ್ತದಾನ ಶಿಬಿರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

Next Post

ಆತ್ಮವಿಶ್ವಾಸ ಬದುಕಿನ ಪ್ರತಿ ಹಂತದ ಅದ್ಭುತ ಶಕ್ತಿ: ಎನ್ಇಎಸ್ ಕಾರ್ಯದರ್ಶಿ ನಾಗರಾಜ ಅಭಿಪ್ರಾಯ

kalpa News

kalpa News

Next Post
ಆತ್ಮವಿಶ್ವಾಸ ಬದುಕಿನ ಪ್ರತಿ ಹಂತದ ಅದ್ಭುತ ಶಕ್ತಿ: ಎನ್ಇಎಸ್ ಕಾರ್ಯದರ್ಶಿ ನಾಗರಾಜ ಅಭಿಪ್ರಾಯ

ಆತ್ಮವಿಶ್ವಾಸ ಬದುಕಿನ ಪ್ರತಿ ಹಂತದ ಅದ್ಭುತ ಶಕ್ತಿ: ಎನ್ಇಎಸ್ ಕಾರ್ಯದರ್ಶಿ ನಾಗರಾಜ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL