ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಿಗಂದೂರು ತುಮುರಿ ಸೇತುವೆ ಕಾಮಗಾರಿ ಮಾರ್ಚ್-ಏಪ್ರಿಲ್ ಅಂತ್ಯದಲ್ಲಿ ಕೊನೆಗೊಳ್ಳುವ ಸಾಧ್ಯತೆ ಇದೆ ಎಂದು ಸಂಸದ ರಾಘವೇಂದ್ರ MPRaghavendra ತಿಳಿಸಿದರು.
ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕೆಲವೊಂದು ತಾಂತ್ರಿಕ ತೊಂದರೆಗಳಿಂದ ಎರಡು ತಿಂಗಳು ವಿಳಂಬವಾಗುವುದು ನಿಜ. ಆದರೆ, ಪ್ರಕೃತಿಯ ಮತ್ತು ಹವಾಮಾನದ ವೈಪರಿತ್ಯದಿಂದಾಗಿ ಮಳೆ ಹೆಚ್ಚಿದ್ದರು, ಕಡಿಮೆ ಇದ್ದರೂ ಆ ಪ್ರದೇಶದಲ್ಲಿ ಕಾಮಗಾರಿ ಸ್ವಲ್ಪ ಕಠಿಣವಾಗಿರುವುದರಿಂದ ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸಲು ಆಗಿಲ್ಲ. ಲೋಕಸಭಾ ಚುನಾವಣೆಯ ಒಳಗೆ ಈ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಕೇಂದ್ರ ಸಚಿವ ನಿತಿನ್ಗಡ್ಕರಿ ಲೋಕಾರ್ಪಣೆ ಮಾಡಲಿದ್ದಾರೆ ಎಂದರು.
Also read: ರಾಜ್ಯದ ವಿವಿಧೆಡೆ ಬರ ಪ್ರವಾಸ | ನ.5ರಿಂದ ಭಾಗಿ: ಮಾಜಿ ಸಿಎಂ ಯಡಿಯೂರಪ್ಪ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post