ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸುಶಾಸನ ದಿವಸ ಆಚರಣಾ ಸಂದರ್ಭದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಮಾಜ ಸೇವೆಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಮಹಿಳಾ ಜನಪ್ರತಿನಿಧಿಗಳಿಗೆ ಅಟಲ್ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಸಮಾರಂಭದಲ್ಲಿ ಶಿವಮೊಗ್ಗ ನಗರ ಮಹಿಳಾ ಮೋರ್ಚಾ ಆಧ್ಯಕ್ಷೆ ಹಾಗೂ ಮಹಾನಗರಪಾಲಿಕೆ ಸದಸ್ಯೆ ಸುರೇಖಾ ಮುರಳೀಧರ್ ಸೇರಿದಂತೆ, ರಾಜ್ಯದ 11 ಮಹಿಳಾ ಜನಪ್ರತಿನಿಧಿಗಳಿಗೆ ಅಟಲ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಣ್ಣ ಕೈಗಾರಿಕೆ ಮತ್ತು ಕರ್ನಾಟಕ ಮುನ್ಸಿಪಲ್ ಆಡಳಿತ ಸಚಿವ ಎಂಟಿಬಿ ನಾಗರಾಜ್ ಕಾರ್ಯಕ್ರಮ ಉದ್ಘಾಟಿಸಿದರು.
ಅಬಕಾರಿ ಸಚಿವ ಗೋಪಾಲಯ್ಯ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ, ರಾಜ್ಯ ಉಪಾಧ್ಯಕ್ಷೆ ಸುನಿತಾ ಜಗದೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾಧ್ಯಕ್ಷೆ ವಿದ್ಯಾ ಲಕ್ಷ್ಮೀಪತಿ ಉಪಸ್ಥಿತರಿದ್ದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post