ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ನ.11ರಿಂದ 15ರವರೆಗೆ ನಡೆಯುವ 37 ನೇ ನ್ಯಾಷನಲ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಕ್ರೀಡಾಕೂಟವನ್ನು ಏರ್ಪಡಿಸಲಾಗಿದ್ದು ಶಿವಮೊಗ್ಗ ಜಿಲ್ಲಾ ವಸತಿ ನಿಲಯದ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.
ಗೌರಾಂಗಿ ಗೌಡ ಎತ್ತರ ಜಿಗಿತ, ಗೌತಮಿ ಗೌಡ 80 ಮೀ ಹರ್ಡಲ್ಸ್, ನಿತಿನ್ ಸಿಂಗ್ ಲಾಂಗ್ ಜಂಪ್, ಆಕಾಶ್ ಎಸ್ ಗೊಲ್ಲರ್ 800 ಮೀ, 400 ಮೀ. ಗೆ ಆಯ್ಕೆಯಾಗಿದ್ದು ಈ ಕ್ರೀಡಾಪಟುಗಳಿಗೆ ಅಥ್ಲೆಟಿಕ್ಸ್ ತರಬೇತುದಾರ ಬಾಳಪ್ಪ ಮಾನೆ ದೈನಂದಿನ ತರಬೇತಿ ನೀಡುತ್ತಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಎಂ.ಟಿ ಮತ್ತು ಸಿಬ್ಬಂದಿ ವರ್ಗದವರು ಕ್ರೀಡಾಪಟುಗಳಿಗೆ ಶುಭ ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post