ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದಲ್ಲಿ ಮತ್ತೆ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದ್ದು, ಮೃತ ಹರ್ಷನ ಕುಟುಂಬಸ್ಥರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ.
ಅನ್ಯಕೋಮಿನ ಯುವಕರ ಗುಂಪು ತಡರಾತ್ರಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್‌ನಲ್ಲಿ ಬಂದು ಆರ್ ಎಸ್ಎಸ್, ಬಜರಂಗದಳದ ಗುಂಡಾಗಳೇ ಬರ್ರೋ ಎಂದು ಘೋಷಣೆ ಕೂಗಿದ್ದಾರೆ. ಹಾಗೂ ಇದೇ ವೇಳೆ ಹರ್ಷನ ಮನೆಯಿರುವ ರಸ್ತೆಯಲ್ಲಿ ಕೂಗುತ್ತಾ ಬೆದರಿಕೆ ಹಾಕಿರುವುದು ತಿಳಿದು ಬಂದಿದೆ.

ಹಲ್ಲೆಗೊಳಗಾದ ಪ್ರಕಾಶ್ ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸೀಗೆಹಟ್ಟಿ ಭಾಗದಲ್ಲಿ ಹೆಚ್ಚಿನ ಪೊಲೀಸರ ನಿಯೋಜಿಸಲಾಗಿದೆ. ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಹಿಜಾಬ್ ನಂತರ ಉಂಟಾದ ಕಲಹ ಹರ್ಷನ ಕೊಲೆಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಬಳಿಕ ಶಾಂತ ಸ್ಥಿತಿಗೆ ಮರಳಿದ್ದ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸಲು ದುಷ್ಕರ್ಮಿಗಳು ಮುಂದಾಗಿದ್ದಾರೆ. ತಡರಾತ್ರಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್‌ನಲ್ಲಿ ಕೂಗುತ್ತಾ ಓಡಾಡಿದ ಅನ್ಯಕೋಮಿನ ಯುವಕರ ಗುಂಪೊಂದು ಮೃತ ಹರ್ಷನ ಸಹೋದರಿ ಹಾಗೂ ಕುಟುಂಬಸ್ಥರಿಗೆ ಬೆದರಿಕೆ ಹಾಕಿದ್ದಾರೆ.










Discussion about this post