ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದಲ್ಲಿ ಕೆಲ ತಿಂಗಳ ಹಿಂದೆ ನಡೆದಿದ್ದ ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಪ್ರಕರಣದ ಆರೋಪಿಗಳ ಮೇಲೆ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟು ಮತ್ತೊಬ್ಬ ತೀರ್ವವಾಗಿ ಗಾಯಗೊಂಡಿರುವ ಘಟನೆ ಹೊನ್ನಾಳ್ಳಿ ತಾಲೂಕಿನ ಚೀಲೂರು ಸಮೀಪ ನಡೆದಿದೆ.
ಹಂದಿ ಅಣ್ಣಿ ಹತ್ಯೆ ಪ್ರಕರಣ ಆರೋಪಿ ಆಂಜನೇಯ ಮೃತಪಟ್ಟಿದ್ದರೆ, ಇನ್ನೋರ್ವ ಆರೋಪಿ ಮಧು ಎಂಬಾತನ ಸ್ಥಿತಿ ಗಂಭಿರವಾಗಿದೆ. ಹಂದಿ ಅಣ್ಣಿ ಕೊಲೆ ಪ್ರಕರಣದ ಸಂಬಂಧ ಆರೋಪಿಗಳು ಇಂದು ನ್ಯಾಯಾಲಯಕ್ಕೆ ಹಾಜರಾಗಿ, ವಿಚಾರಣೆ ಮುಗಿಸಿ ಊರಿಗೆ ಹಿಂದಿರುವ ಸಂದರ್ಭದಲ್ಲಿ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಮೃತಪಟ್ಟಿರುವ ಹರಿಹರ ಮೂಲದ ಆಂಜನೇಯ ಹಾಗೂ ಗಾಯಗೊಂಡಿರುವ ಮಧು ಇವರಿಬ್ಬರು ದ್ವಿಚಕ್ರ ವಾಹನದಲ್ಲಿ ಚೀಲೂರು ಮಾರ್ಗದಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ನಾಲ್ಕೈದು ಮಂದಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿ, ಇಬ್ಬರು ಕೆಳಕ್ಕೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಅಣ್ಣಿ ಹತ್ಯೆ ಪ್ರಕಣದ ಆರೋಪಿ ಆಂಜನೇಯ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನೋರ್ವ ಆರೋಪಿ ಮಧು ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಥಳದಲ್ಲಿ ಸ್ಕಾರ್ಪಿಯೋ ವಾಹನವೊಂದು ಪತ್ತೆಯಾಗಿದೆ ಎನ್ನಲಾಗಿದೆ.
ರೌಡಿ ಶೀಟರ್ ಹಂದಿ ಅಣ್ಣಿ ಎಂಬಾತನನ್ನು ಕಳೆದ ವರ್ಷ ಜುಲೈ ತಿಂಗಳಿನಲ್ಲಿ ವಿನೋಬನಗರದ ಪೊಲೀಸ್ ಚೌಕಿ ಬಳಿ ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಬಳಿಕ 8 ಮಂದಿ ಆರೋಪಿಗಳು ಚಿಕ್ಕಮಗಳೂರು ಪೊಲೀಸರ ಮುಂದೆ ಶರಣಾಗಿದ್ದರು. ಜೈಲು ಸೇರಿದ್ದ ಎಂಟು ಮಂದಿ ಪೈಕಿ ಇಬ್ಬರು ಜಾಮೀನು ಪಡೆದು ಜೈಲಿನಿಂದ ಹೊರಬಂದು ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಹಂದಿ ಅಣ್ಣಿ ಹತ್ಯೆಗೆ ಪ್ರತಿಕಾರವಾಗಿ ಅಣ್ಣಿ ಬೆಂಬಲಿಗರೇ ಈ ಒಂದು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಹೊನ್ನಾಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















