ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮುಂದಿನ ಚುನಾವಣೆಯಲ್ಲಿ 150 ಸೀಟುಗಳನ್ನು ಗೆಲ್ಲಲೇಬೇಕು ಎಂಬ ಗುರಿಯನ್ನಿಟ್ಟುಕೊಂಡು ರಾಜ್ಯ ಪ್ರವಾಸ ಪ್ರಾರಂಭ ಮಾಡುತ್ತಿದ್ದೇನೆ. ಪ್ರತಿಯೊಂದು ಜಿಲ್ಲೆಗೂ ಭೇಟಿ ನೀಡಿ, ಬಿಜೆಪಿ ಅಧಿಕಾರಕ್ಕೆ ತರಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಹಾಗೂ ಸಂಘಟನೆಯನ್ನು ಬಲಪಡಿಸುವ ಕೆಲಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಹೇಳಿದರು.
ನಗರದ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರ PM Modi ಆಶೀರ್ವಾದ ಹಾಗೂ ಅವರು ಮಾಡಿರುವ ಒಳ್ಳೆಯ ಕೆಲಸಗಳನ್ನು ಆಧಾರವಾಗಿಟ್ಟುಕೊಂಡು 150ಕ್ಕೂ ಹೆಚ್ಚು ಸೀಟುಗಳನ್ನು ಗೆದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ತಮ್ಮ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ. ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿಯೂ ತಾವು ಗೆಲುವು ಸಾಧಿಸುವ ಪ್ರಯತ್ನ ಮಾಡುತ್ತೇವೆ ಎಂದರು.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಬೇಡ:
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡಬೇಕು ಎಂದು ಅಂತಿಮಗೊಳಿಸಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ತಾನು ಈಗಾಗಲೇ ಈ ವಿಷಯವನ್ನು ಸ್ಪಷ್ಟಪಡಿಸಿದ್ದೇನೆ. ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿನ ಬದಲಾಗಿ ಸ್ವಾತಂತ್ರ್ಯ ಹೋರಾಟಗಾರರು ಅಥವಾ ಬೇರೆ ಯಾವುದೇ ಪ್ರಮುಖರ ಹೆಸರನ್ನು ಇಡುವುದು ಸೂಕ್ತ ಎಂದರು.
Also read: ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆ, ಶೀಘ್ರ ದಿನಾಂಕ ಪ್ರಕಟ: ಗೃಹ ಸಚಿವ ಆರಗ ಜ್ಞಾನೇಂದ್ರ
ಸಚಿವ ಸಂಪುಟ ವಿಸ್ತರಣೆ ವರಿಷ್ಠರ ನಿರ್ಧಾರ:
ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ದೆಹಲಿಗೆ ತೆರಳಲಿದ್ದಾರೆ. ಅಲ್ಲಿಯೇ ಸಚಿವ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿ, ಕೇಂದ್ರ ಸಚಿವ ಅಮಿತ್ ಷಾ Amith shath ರಾಜ್ಯ ಭೇಟಿ ವೇಳೆ ಅಂತಿಮಗೊಳ್ಳಲಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post