ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ನಗರದ ಕೆಲವು ರಸ್ತೆಗಳಲ್ಲಿ ನಿಗದಿತ ಸಮಯದಲ್ಲಿ ಭಾರೀ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದು, ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯ ರಸ್ತೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಕೆಲವು ರಸ್ತೆಗಳಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಿದ್ದಾರೆ.
ಎಲ್ಲೆಲ್ಲೆ ನಿಷೇಧ?
ಗೋಪಿ ಸರ್ಕಲ್’ನಿಂದ ಜೆಪಿಎನ್ ರಸ್ತೆ, ಜ್ಯೂವೆಲ್ ರಾಕ್ ಹೊಟೇಲ್ ರಸ್ತೆ ಮಾರ್ಗವಾಗಿ ಕುವೆಂಪು ರಸ್ತೆವರೆಗೆ, ಜೈಲ್ ರಸ್ತೆಯಿಂದ ಲಕ್ಷ್ಮಿ ಟಾಕೀಸ್’ವರೆಗೆ ಭಾರಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಈ ರಸ್ತೆಗಳು ಕಿರಿದಾಗಿದ್ದು ಭಾರಿ ವಾಹನಗಳ ಓಡಾಟದಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಆದ್ದರಿಂದ ಈ ಮಾರ್ಗದಲ್ಲಿ ಭಾರಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















