ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರ ಉಪವಿಭಾಗ 2 ಹಾಗೂ ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ನಡೆಯುವುದರಿಂದ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರದ ಹಲವು ಪ್ರದೇಶಗಳಲ್ಲಿ ನ.8 ಹಾಗೂ ನ.9 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.
ನ.9-ಶಿವಮೊಗ್ಗ ನಗರ:
ಶಿವಮೊಗ್ಗ ನಗರ ಉಪ ವಿಭಾಗ 2 ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನ.9 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಲಿಯಾಜ್ ನಗರ 11 ರಿಂದ 14 ನೇ ಕ್ರಾಸ್, ಇತಿಹಾದ್ ಲೇಔಟ್, ಹೆನ್ರಿ ತೋಟ, ಕಲ್ಲೂರ್ ಮಂಡ್ಲಿ ಇಂಡಸ್ಟ್ರಿಯಲ್ ಏರಿಯಾ, ಇಲಿಯಾಜ್ ನಗರ ಚಾನಲ್ ಏರಿಯಾ, ಶಾರದ ನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.
ನ.8-ಶಿವಮೊಗ್ಗ ಗ್ರಾಮಾಂತರ:
ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ನ.8 ರಂದು ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನ. 8 ರ ಬೆಳಿಗ್ಗೆ 10 ಗಂಟೆಯಿAದ ಸಂಜೆ 6 ರವರೆಗೆ ಈ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಕುಂಸಿ, ಬಾಳೆಕೊಪ್ಪ, ಚೋರಡಿ, ತುಷ್ಟೂರು, ಕೋಣಿಹೂಸೂರು, ಹೊರಬೈಲು, ಶೆಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು, ಹಾರನಹಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ. ರಟ್ಟೆಹಳ್ಳಿ ಇನ್ನಿತರೆ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















