ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇರುವ ಕಾರಣ ಜು.26 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಹಳೇ ಮಂಡ್ಲಿ, ಗಂಧರ್ವ ನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯ ವಾಣಿ ಪ್ರೆಸ್ ಹತ್ತಿರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಜು.27 ರಂದು ವಿದ್ಯುತ್ ವ್ಯತ್ಯಯ
ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿ ಎಫ್-17 ಅಂಡ್ ಎಂಸಿ ಎಫ್-18 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.27ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯರೆಗೆ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹೊನ್ನವಿಲೆ, ನವುಲೆ ಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಮೆಸ್ಕಾಂ ನೊಂದಿಗೆ ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















