Read - 2 minutes
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸ್ಪೆಷಲ್ ಓಲಿಂಪಿಕ್ಸ್ ಭಾರತ್ ಕರ್ನಾಟಕ (ಎಸ್‍ಓಬಿಕೆ) ಹಾಗೂ ಸಕ್ಷಮ, ಮನಸ್ಫೂರ್ತಿ, ಸರ್ಜಿ ಫೌಂಡೇಷನ್, ಕ್ರೀಡಾ ಭಾರತಿ, ರೋಟರಿ ಕ್ಲಬ್ ಶಿವಮೊಗ್ಗ ಮಿಡ್ ಟೌನ್ ಇವರ ಸಂಯುಕ್ತಾಶ್ರಯದಲ್ಲಿ ಆ.17, 18, ಹಾಗೂ 19ರಂದು ಬಿ.ಹೆಚ್. ರಸ್ತೆಯಲ್ಲಿರುವ ಶ್ರೀ ಮಾತಾ ಮಾಂಗಲ್ಯ ಮಂದಿರದಲ್ಲಿ ಬೌದ್ಧಿಕ ಅಸಾಮರ್ಥ್ಯ ಮಕ್ಕಳ ಫ್ಲೋರ್ ಬಾಲ್ ಆಟದ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
ಆ.17ರ ನಾಳೆ ಬೆಳಿಗ್ಗೆ 10 ಗಂಟೆಗೆ ಮಾಜಿ ಸಂಸದ ಹಾಗೂ ಶಾಸಕ ಆಯನೂರು ಮಂಜುನಾಥ್ ಶಿಬಿರ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ, ಅಂಗವಿಕಲ ಕಲ್ಯಾಣ ಇಲಾಖಾಧಿಕಾರಿ ಶಿಲ್ಪಾ ದೊಡ್ಡಮನಿ, ಎಸ್‍ಓಬಿಕೆ ವಲಯಾಧಿಕಾರಿ ಅಮರೇಂದ್ರ ಅಂಜನಪ್ಪ, ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ, ಜಿಲ್ಲಾ ಬ್ರಾಹ್ಮಣ ಮಹಾಸಬಾ ಅಧ್ಯಕ್ಷ ನಟರಾಜ್ ಭಾಗವತ್, ಮಾನಸ ಸಮೂಹ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ. ರಜನಿ ಪೈ, ಕ್ರೀಡಾ ಭಾರತಿ ಅಧ್ಯಕ್ಷ ಡಾ. ನಾಗರಾಜ್ ಹಾಗೂ ಇನ್ನಿತರರು ಆಗಮಿಸಲಿದ್ದು, ಸಕ್ಷಮ ಅಧ್ಯಕ್ಷರಾದ ನೇತ್ರ ತಜ್ಞ ಡಾ. ಪ್ರಶಾಂತ್ ಇಸ್ಲೂರ್ ಅಧ್ಯಕ್ಷತೆ ವಹಿಸಲಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post