ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಸರ್ಕಾರಿ ನೌಕರರ ಭವನದಲ್ಲಿ ಬಸವೇಶ್ವರ ಪಟ್ಟಣ ಪತ್ತಿನ ಸಹಕಾರ ಸಂಘವು 2015-16 ರಿಂದ 2019-20ನೇ ಸಾಲುಗಳಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಬಿಎ ಮತ್ತು ಎಂ.ಎ ಕನ್ನಡ ಐಚ್ಛಿಕ ಪರೀಕ್ಷೆಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಗಳಿಸಿ ತೇರ್ಗಡೆಯಾಗಿರುವ ಹಾಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆ, ಸಾಂಸ್ಕೃತಿಕ ವಿಷಯದಲ್ಲಿ ಸಾಧನೆ ಮಾಡಿರುವ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಗಳ ಸಾನಿಧ್ಯ ವಹಿಸಿದ್ದರು. ಕುವೆಂಪು ವಿವಿಯ ಉಪಕುಲಪತಿ ಡಾ. ಬಿ.ಪಿ.ವೀರಭದ್ರಪ್ಪ, ಸಂಘದ ಅಧ್ಯಕ್ಷ ಕೆ.ಎಸ್. ತಾರಾನಾಥ, ಉಪಾಧ್ಯಕ್ಷ ಬಳ್ಳೇಕೆರೆ ಸಂತೋಷ್ ಹಾಗೂ ಸಂಘದ ನಿರ್ದೇಶಕರುಗಳು, ನೌಕರ ವರ್ಗದವರು, ಪಿಗ್ಮಿ ಸಂಗ್ರಹಕಾರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post