ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
2020-21ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ. ಕನ್ನಡ ವಿಷಯದಲ್ಲಿ ಶೇ. 85 ಕ್ಕಿಂತ ಹೆಚ್ಚು ಅಂಕ ಪಡೆದ ಭಾವಸಾರ ಸಮಾಜದ ವಿದ್ಯಾರ್ಥಿಗಳಿಗೆ ಭಾವಸಾರ ಕ್ಷತ್ರಿಯ ಯುವಕ ಸಂಘದಿಂದ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ.
66 ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಭಾವಸಾರ ಕ್ಷತ್ರಿಯ ಯುವಕ ಸಂಘದ ವತಿಯಿಂದ 2020-21ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ. ಕನ್ನಡ ವಿಷಯದಲ್ಲಿ ಶೇ. 85 ಕ್ಕಿಂತ ಹೆಚ್ಚು ಅಂಕ ಪಡೆದ ಭಾವಸಾರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನ. 21ರ ಭಾನುವಾರ ಸಂಜೆ 5 ಗಂಟೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನೀಡಲಾಗುವುದು.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಭಾವಸಾರ ಸಮಾಜದ ವಿದ್ಯಾರ್ಥಿಗಳು ಭಾವಸಾರ ಕ್ಷತ್ರಿಯ ಮಹಾಜನ ಸಮಾಜದ ಕಛೇರಿಯಲ್ಲಿ ಅಂಕಪಟ್ಟಿಯ ಜೆರಾಕ್ಸ್ ಪ್ರತಿ, ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ನೀಡಿ ತಮ್ಮ ಹೆಸರನ್ನು ನ. 17ರೊಳಗೆ ನೊಂದಾಯಿಸುವಂತೆ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಕೇಶ್ ಸಾಕ್ರೆ, ಮೊ: 9844152902 ಸಚಿನ್ ಬೇದ್ರೆ, ಮೊ: 9481466666 ವಿನಯ್ ತಾಂದಲೆ, ಮೊ: 7204563074 ಗೆ ಸಂಪರ್ಕಿಸುವಂತೆ ಸಂಘದ ಅಧ್ಯಕ್ಷರಾದ ವಿನಯ್ ತಾಂದಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post