ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕ್ಯಾನ್ಸರ್ #Cancer ರೋಗವನ್ನು ಆರಂಭದಲ್ಲೇ ಸುಲಭವಾಗಿ ಪತ್ತೆ ಮಾಡಿಕೊಳ್ಳುವ ವಿಧಾನವನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕೆಂದು ತೀರ್ಥಹಳ್ಳಿಯ ಮಂಗಳೂರು ಇನಸ್ಟಿಟ್ಯೂಟ್ ಆಫ್ ಆಂಕಾಲಜಿ ಸೂಪರ್ ಸ್ಪೆಷಾಲಿಟಿ ಕ್ಯಾನ್ಸರ್ ಆಸ್ಪತ್ರೆಯ ಡಾ. ದಿವ್ಯಜ್ಯೋತಿ ತಿಳಿಸಿದರು
ಅವರು ಇಂದು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು, ಹಿರಿಯ ವಿದ್ಯಾರ್ಥಿಗಳ ಸಂಘ, ಮಹಿಳಾ ಸಬಲೀಕರಣ ಘಟಕ ಹಾಗೂ ಮಂಗಳೂರು ಇನಸ್ಟಿಟ್ಯೂಟ್ ಆಫ್ ಆಂಕಾಲಜಿ ಸೂಪರ್ ಸ್ಪೆಷಾಲಿಟಿ ಕ್ಯಾನ್ಸರ್ ಆಸ್ಪತ್ರೆ ತೀರ್ಥಹಳ್ಳಿ ಇವರ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಕ್ಯಾನ್ಸರ್ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದರು.
ಕ್ಯಾನ್ಸರ್ ಹೆಣ್ಣು ಮಕ್ಕಳಲ್ಲಿ ಎದೆಯಲ್ಲಿ ಮತ್ತು ಗರ್ಭಕೋಶದಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಇತ್ತೀಚಿನ ದಿನಗಳಲ್ಲಿ ಇಂತಹ ವಯಸ್ಸಿನವರಿಗೆ ಕ್ಯಾನ್ಸರ್ ಬರುತ್ತದೇ ಎಂಬುದಿಲ್ಲ ಯಾವ ವಯಸ್ಸಿನವರಿಗೂ ಕೂಡ ಬರಬಹುದು ಎಂದರು.
Also read: ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ | ಜೈನ್ ಪಬ್ಲಿಕ್ ವಿದ್ಯಾರ್ಥಿಗಳಿಗೆ ಬಹುಮಾನ
ಸೋಂಕು ರೋಗದಿಂದ ಕ್ಯಾನ್ಸರ್ ಅಗಮಿಸುತ್ತದೆ. ಇಂತಹದವನ್ನು ತಡೆಗಟ್ಟಲು ಅಂತಹವರು ಕೂಡಲೇ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು. ಕಾರಣ ಈ ಸೋಂಕು ರೋಗದಿಂದ ಉತ್ಪತ್ತಿಯಾದ ರೋಗಾಣುಗಳು ಕ್ಯಾನ್ಸರ್ ರೋಗಕ್ಕೆ ಕಾರಣವಾಗುತ್ತದೆ ಎಂದು ತಿಳಿಸಿದರು.
ಮತ್ತೋರ್ವ ಸಂಪನ್ಮೂಲ ವ್ಯಕ್ತಿಯಾಗಿ ಅಗಮಿಸಿದ್ದ ಡಾ. ಭವ್ಯ ಮಾತನಾಡಿ, ಕ್ಯಾನ್ಸರ್ ಎಂಬ ರೋಗವನ್ನು ಯಾರೂ ಹಗುರವಾಗಿ ಗಮನಿಸಬಾರದು, ಕೆಲವು ದುರಭ್ಯಾಸಸಗಳಿಂದ ಬಂದರೆ, ಮತ್ತೆ ಕೆಲವರಿಗೆ ವಂಶವಾಹಿಯಾಗಿ ಬರುತ್ತದೆ. ವರ್ಷಕ್ಕೆ ಒಮ್ಮೆಯಾದರೂ ನಮ್ಮ ದೇಹವನ್ನು ವೈದ್ಯರಲ್ಲಿ ಹೋಗಿ ತಪಾಸಣೆ ಮಾಡಿಸುವುದು ಉತ್ತಮ. ಕ್ಯಾನ್ಸರ್ ಆರಂಭದಲ್ಲೇ ಗೊತ್ತಾದರೆ ಖಂಡಿತವಾಗಿಯೂ ಅಂತಹವರನ್ನು ಗುಣಪಡಿಸಬಹುದು ಎಂದು ಹೇಳಿದರು.
ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಟಿ. ಅವಿನಾಶ್ ಮಾತನಾಡಿ, ತೀರ್ಥಹಳ್ಳಿಯಲ್ಲಿ ಆರಂಭಿಸಿರುವ ಮಂಗಳೂರು ಇನಸ್ಟಿಟ್ಯೂಟ್ ಆಫ್ ಆಂಕಾಲಜೆ ಸೂಪರ್ ಸ್ಪಷಾಲಿಟಿ ಆಸ್ಪತ್ರೆಗೆ ನಮ್ಮ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿ ಪ್ರಾತ್ಯಕ್ಷಿಕೆಯ ಮೂಲಕ ಕ್ಯಾನ್ಸರ್ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಗಿರೀಶ್ ಕಾರಂತ್, ಮತ್ತು ಮಹಿಳಾ ಸಬಲೀಕರಣ ಘಟಕದ ಡಾ. ಮಮತ ಎಸ್.ಎಮ್. (ವಾಣಿಜ್ಯ ಶಾಸ್ತ್ರದ ವಿಭಾಗ ಮುಖ್ಯಸ್ಥರು) ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ.ಏ. ಶಿವಮೂರ್ತಿ
ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post