ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾದಕ ದ್ರವ್ಯ ವ್ಯಸನ ತಡೆಗಟ್ಟಲು ಯುವ ಸಮೂಹ ಜಾಗೃತರಾಗಬೇಕಿದ್ದು ಇಂತಹ ಸಾಮಾಜಿಕ ಪಿಡುಗು ದೂರ ಓಡಿಸಲು ನಮ್ಮೊಂದಿಗೆ ಕೈಜೋಡಿಸಿ ಎಂದು ಶಿವಮೊಗ್ಗ ಡಿವೈಎಸ್‌ಪಿ ಗಜಾನನ ಸುತಾರ್ ಹೇಳಿದರು
ನಗರದ ಕಸ್ತೂರಬಾ ಬಾಲಿಕ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘ ಹಾಗೂ ಎನ್.ಎಸ್.ಎಸ್ ಘಟಕ ವತಿಯಿಂದ ಈಚೆಗೆ ಏರ್ಪಡಿಸಿದ್ದ ಮಾದಕ ದ್ರವ್ಯ ವ್ಯಸನ ಜನಜಾಗೃತಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು ಸಮಾಜದಲ್ಲಿ ಮಾದಕ ವ್ಯಸನಕ್ಕೆ ಹೆಚ್ಚಾಗಿ ಯುವ ಸಮೂಹ ತುತ್ತಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದ್ದು ಶಿಕ್ಷಕರು ಮತ್ತು ಪೋಷಕರು ಸದಾ ಜಾಗೃತರಾಗಿರಬೇಕಿದೆ. ಅಂತಹ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವುದು ಕಂಡುಬಂದಲ್ಲಿ ನಿಮ್ಮ ಹತ್ತಿರದ ಪೋಲಿಸ್ ಠಾಣೆಗೆ ಮಾಹಿತಿ ನೀಡಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಟಿ.ಬಸವರಾಜ, ಎನ್.ಎಸ್.ಎಸ್ ಅಧಿಕಾರಿಗಳಾದ ಡಿ.ಹೆಚ್.ರಾಘವೇಂದ್ರ, ಪ್ರಶಿಕ್ಷಣಾರ್ಥಿ ಕು.ಮಧು.ಸಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಕು.ವಾಹಿನಿ ಸ್ವಾಗತಿಸಿ ಕು.ಅನುಜ್ಞಾ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post