ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ಪೊಲೀಸರು ಕೈಗೊಂಡ ವಿಶೇಷ ಕಾರ್ಯಾಚರಣೆಯಲ್ಲಿ ಹಲವು ಪ್ರಕರಣಗಳನ್ನು ದಾಖಲಿಸಿ, ಬಹಳಷ್ಟು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ತಂಡ ವಿಶೇಷ ಕಾರ್ಯಾಚರಣೆ ನಡೆಸಿದ್ದು, ನಗರ ವ್ಯಾಪ್ತಿಯಲ್ಲಿ 50 ಚೆಕ್ ಪೋಸ್ಟ್ ತೆರೆದು ಅನುಮಾನಾಸ್ಪದವಾಗಿ ಓಡಾಡುವವರ ವಿಚಾರಣೆ ನಡೆಸಿದ್ದಾರೆ.
ಅನುಮಾನಾಸ್ಪದವಾಗಿ ಓಡಾಡುವ ವಾಹನ ಮತ್ತು ವ್ಯಕ್ತಿಗಳ ತಪಾಸಣೆ (30 ವರ್ಷದೊಳಗಿನ ವಯಸ್ಕರ ಮೇಲೆ) ನಡೆಸಿ ಅಪರಾಧ ಹಿನ್ನೆಲೆ ಉಳ್ಳವರ ಮನೆಗಳ ತಪಾಸಣೆ ನಡೆಸಿದ್ದಾರೆ. ಅಲ್ಲದೇ, ನಗರದ ವೈನ್ ಶಾಪ್ ಸುತ್ತ ಹಾಗೂ ನಿರ್ಜನ ಪ್ರದೇಶಗಳಲ್ಲಿ ಕುಡಿದು ಜನರಿಗೆ ತೊಂದರೆ ಕೊಡುವವರ ವಿರುದ್ದ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ.
Also read: ನನ್ನ ಮಗನ ಕಾರ್ಯದೊಳಗೆ ಹಂತಕರನ್ನು ಗಲ್ಲಿಗೇರಿಸಿ: ಪ್ರವೀಣ್ ತಾಯಿ ಆಕ್ರೋಶದ ನುಡಿ
ಇದರಲ್ಲಿ ಒಟ್ಟು 11 ಅಬಕಾರಿ ಪ್ರಕರಣಗಳು, 350 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು, 93 ಲಘು ಪ್ರಕರಣಗಳು, 96 ತಂಬಾಕು ಪ್ರಕರಣಗಳು , 10 ಗಾಂಜಾ ಸೇವನೆ ಮಾಡಿದ ಜನರ ಮೇಲೆ ಪ್ರಕರಣಗಳನ್ನು ದಾಖಲಿಸಿ, 1 ತಲ್ವಾರ್, 4 ಹರಿತವಾದ ಡ್ಯಾಗರ್ಗಳನ್ನೂ ವಶಕ್ಕೆ ಪಡೆದು ಕಾನೂನು ರೀತಿ ಕ್ರಮ ಕೈಗೊಳ್ಳಲಾಗಿದೆ.
ಈ ಕಾರ್ಯಾಚರಣೆಯು ನಿರಂತರವಾಗಿ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿ ಒಂದು ಗಂಟೆಗಳ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post