ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಾಧಿಕಾರಿಗಳಿಗೆ ನೀಡುವ ವಿಶೇಷ ಭತ್ಯೆಯನ್ನು ತಮಗೂ ನೀಡಬೇಕೆಂದು ಆಗ್ರಹಿಸಿ ಆಯುಷ್ ಫೆಡರೇಶನ್ ಆಫ್ ಇಂಡಿಯಾ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಆಯುಷ್ ಇಲಾಖೆ ವೈದ್ಯಾಧಿಕಾರಿಗಳು ಜೂನ್ 1 ರಿಂದ 7ನೆಯ ತಾರೀಖಿನವರೆಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತಿದ್ದು, ವೇತನ ಭತ್ಯೆ, ಸ್ಥಾನಮಾನ ವಿಸ್ತರಣೆ ಕುರಿತು ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದ್ದರೂ, ಆಯುಷ್ ವೈದ್ಯಾಧಿಕಾರಿಗಳನ್ನು ಹೊರತುಪಡಿಸಿ ವಿಶೇಷ ಭತ್ಯೆ ನೀಡದಿರುವುದು, ವೈದ್ಯಾಧಿಕಾರಿಗಳಿಗೆ ಮಾಡುವ ತಾರತಮ್ಯವನ್ನು ಖಂಡಿಸುತ್ತೇವೆ ಎಂದು ಮನವಿಯಲ್ಲಿ ಹೇಳಿದ್ದಾರೆ.
ಸರ್ಕಾರಿ ಆಯುಷ್ ವೈದ್ಯರಿಗೆ ತಾರತಮ್ಯ ಮಾಡದೆ ಅವರ ಬೇಡಿಕೆಯನ್ನು ಅತಿ ಶೀಘ್ರವಾಗಿ ಈಡೇರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಎಲ್ಲಾ ಖಾಸಗಿ ಆಯುಷ್ ವೈದ್ಯರುಗಳು, ಎಲ್ಲಾ ಸರ್ಕಾರಿ ಆಯುಷ್ ವೈದ್ಯರಿಗೆ ಸಂಪೂರ್ಣ ಬೆಂಬಲದೊಂದಿಗೆ ಉಗ್ರ ಹೋರಾಟಕ್ಕೆ ಎಡೆ ಮಾಡಿಕೊಡದೆ, ಎಲ್ಲಾ ಸರ್ಕಾರಿ ಆಯುಷ್ ವೈದ್ಯರುಗಳ ಬೇಡಿಕೆಗಳನ್ನು ಅತಿ ಶೀಘ್ರದಲ್ಲಿ ಕಾರ್ಯರೂಪಕ್ಕೆ ತರಬೇಕೆಂದು ಮನವಿ.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ಎಚ್.ಸಿ. ಶಶಿಕಾಂತ್, ಜಿಲ್ಲಾ ಕಾರ್ಯದರ್ಶಿ ಡಾ. ಎಂ ಎಸ್. ಸಂತೋಷ್, ಆಯುಷ್ ವೈದ್ಯರಾದ ಡಾ. ಮರುಳಾರಾಧ್ಯ ಮಠ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post