ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳ ಖಾಯಂ ಉದ್ಯೋಗಿಗಳು ಮತ್ತು ಅವರ ಕುಟುಂಬದವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಮಾಧ್ಯಮ ಪಟ್ಟಿಯಲ್ಲಿರುವ ದಿನ/ವಾರ/ಪಾಕ್ಷಿಕ/ಮಾಸಿಕ/ದ್ವೈಮಾಸಿಕ ಪತ್ರಿಕಗಳ ಖಾಯಂ ಉದ್ಯೋಗಿಗಳು ಮತ್ತು ಕುಟುಂಬದವರಾದ ಪತಿ/ಪತ್ನಿ ಮತ್ತು ಅವಲಂಬಿತ ಇಬ್ಬರು ಮಕ್ಕಳಿಗೆ ಮಾತ್ರ ಆಯುಷ್ಮಾನ್ ಆರೋಗ್ಯ ಕಾರ್ಡ್‌ಗಳನ್ನು ನೀಡಲಾಗುವುದು.
ಪತ್ರಕರ್ತರು ಹಾಗೂ ಅವರ ಅವಲಂಬಿತರು ನೋಂದಣಿಯ ಸಂದರ್ಭದಲ್ಲಿ ಆಧಾರ್ ಕಾರ್ಡ್, ಮಾಧ್ಯಮ ಸಂಸ್ಥೆಯ ನೇಮಕಾತಿ ಪತ್ರ ಹಾಗೂ ಕಾರ್ಯನಿರತ ಪತ್ರಕರ್ತರ ಗುರುತಿನ ಚೀಟಿ ಅಥವಾ ಜಿಲ್ಲಾ ಮಟ್ಟದ ಸಮಿತಿಯು ನೀಡುವ ಪತ್ರವನ್ನು ಅರ್ಜಿಯೊಂದಿಗೆ ಆಗಸ್ಟ್ 15 ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ಶಿವಮೊಗ್ಗ ಇಲ್ಲಿ ಸಲ್ಲಿಸುವಂತೆ ಇಲಾಖಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post