ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಗಾಂಜಾ ಸೇರಿದಂತೆ ವಿವಿಧ ವಸ್ತುಗಳು ಲಭ್ಯವಾಗುತ್ತಿರುವ ಬಗ್ಗೆ ಚರ್ಚೆ ನಡೆಸಿ ತನಿಖೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ಗಾಂಜಾ ಸೇರಿದಂತೆ ಇತರೆ ವಸ್ತುಗಳು ಲಭ್ಯವಾಗುವ ಕುರಿತ ವಿಡಿಯೋ ಬಿತ್ತರವಾದ ಕುರಿತು ಮಾತನಾಡಿದ ಅವರು, ಪರಪ್ಪನ ಆಗ್ರಹಾರದಲ್ಲಿ ಗಾಂಜಾ ಸೇರಿದಂತೆ ಎಲ್ಲಾ ಮಾದಕ ವಸ್ತುಗಳು ಕೈದಿಗಳಿಗೆ ಲಭ್ಯವಾಗುತ್ತಿವೆ. ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. ಭದ್ರತೆಯನ್ನು ಅತ್ಯಂತ ಬಿಗಿ ಮಾಡಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post