ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಬಂದಿರುವ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ, Minister Madhu Bangarappa ಮಾಧ್ಯಮದಲ್ಲಿ ಇದನ್ನು ತೊರಿಸುತ್ತಿದ್ದಾರೆ. ಯಾವುದನ್ನು ಹಗುರವಾಗಿ ತೆಗೆದುಕೊಳ್ಳಲು ಬರೋದಿಲ್ಲ. ಯಾರು ಇದನ್ನು ಮಾಡಿದ್ದಾರೆ ಪತ್ತೆ ಹಚ್ಚುತ್ತೇವೆ ಎಂದು ಹೇಳಿದ್ದಾರೆ.
ಸಾಗರದಲ್ಲಿ ಅವರು ಸುಧ್ದಿಗಾರರೊಂದಿಗೆ ಮಾತನಾಡಿ, ಶಾಲೆಗಳಿಗೆ ರಕ್ಷಣೆ ಕೊಡಲು ನಾವು ಮಾತನಾಡಿದ್ದೇವೆ. ಇದನ್ನು ಹಗುರವಾಗಿ ತೆಗೆದುಕೊಳ್ಳುವ ಮಾತಿಲ್ಲ. ಸುರಕ್ಷತಾ ದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ನಮ್ಮ ಮೇಲೆ ವಿಶ್ವಾಸ ಇಡಬೇಕು. ಯಾರು ಈಮೇಲ್ ಕಳಿಸಿದ್ದಾರೆ ಅವರನ್ನು ಬಿಡುವ ಪ್ರಶ್ನೆ ಇಲ್ಲ. ಪೋಷಕರು ಧೈರ್ಯವಾಗಿರಬೇಕು ಎಂದರು.
ನನ್ನ ಇಲಾಖೆ ಬಗ್ಗೆ ನಾನು ಮುತುವರ್ಜಿ ವಹಿಸಿದ್ದೇನೆ. ಮಕ್ಕಳಿಗೆ ಶಾಲೆಗಳಿಗೆ ರಕ್ಷಣೆ ನೀಡುವುದು ನಮ್ಮ ಜವಾಬ್ದಾರಿ. ಡಿಸಿಎಂ ಅವರು ಸಹ ಶಾಲೆಗೆ ಭೇಟಿ ನೀಡಲಿದ್ದಾರೆ. ನಾನು ಸಹ ಸಂಜೆ ಬೆಂಗಳೂರಿಗೆ ಹೋಗುತ್ತೇನೆ. ಈಗಾಗಲೇ ಅಧಿಕಾರಿಗಳ ಜೊತೆ ಮಾಹಿತಿ ತಗೊಂಡಿದ್ದೇನೆ. ಗೃಹ ಸಚಿವರು ಸಹ ಕರ್ತವ್ಯ ಮಾಡುತ್ತಿದ್ದಾರೆ. ಅವರ ಜೊತೆ ನಾನು ಸಂಪರ್ಕದಲ್ಲಿದ್ದೇನೆ. ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ ಎಂದರು.
Also read: ಪತ್ರಿಕಾ ವಿತರಕನ್ನೂ ಗುರುತಿಸಿ, ಸನ್ಮಾನಿಸುವುದು ಅತ್ಯವಶ್ಯ: ಕೆ. ವಿ. ಪ್ರಭಾಕರ್ ಅಭಿಪ್ರಾಯ
ಬಂದಿರುವ ಇ-ಮೇಲ್ ನೋಡೋಕೆ ಫೇಕ್ ತರಾ ಆಗಿ ಕಾಣುತ್ತಿದೆ. ಈ ಬಗ್ಗೆ ಮಾಹಿತಿ ತಗೋತಿದ್ದೇನೆ. ಪೋಷಕರು ಗಾಬರಿ ಆಗಿದ್ದಾರೆ. ಹಾಗಾಗಿ ಸುಮ್ಮನೆ ಇರಲು ಸಾಧ್ಯವಿಲ್ಲ. ಗೃಹ ಇಲಾಖೆಯು ಅವರ ಕೆಲಸ ಮಾಡುತ್ತಿದೆ. ನಾನು ಸಹ ಬೆಂಗಳೂರಿಗೆ ಹೋಗುತ್ತಿದ್ದೇನೆ. ಸಂಪೂರ್ಣ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post