No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆರ್‌ಎಸ್‌ಎಸ್ ಬಗ್ಗೆ ಟೀಕೆ ಹಿನ್ನೆಲೆ: ಸಿದ್ಧರಾಮಯ್ಯ ವಿರುದ್ಧ ಶಾಸಕ ಈಶ್ವರಪ್ಪ ವಾಗ್ದಾಳಿ

kalpa News by kalpa News
April 10, 2023
in ಶಿವಮೊಗ್ಗ
0
ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಂತೋಷ್ ಆರೋಪದ ಅಮೂಲಾಗ್ರ ತನಿಖೆಗೆ ಸಚಿವ ಈಶ್ವರಪ್ಪ ಒತ್ತಾಯ

File image

Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಆರ್ ಎಸ್ ಎಸ್ RSS ಟೀಕಿಸುವುದನ್ನು ಮಾಜಿ ಸಿಎಂ ಸಿದ್ದರಾಮಯ್ಯ ನಿಲ್ಲಿಸದೆ ಹೋದರೆ ಅವರು ನಿರ್ನಾಮ ಆಗುತ್ತಾರೆ. ಕಾಂಗ್ರೆಸ್ ಪಕ್ಷ ಕೂಡ ನಿರ್ನಾಮ ಆಗುತ್ತದೆ ಎಂದು  ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ K.S. Eshwarappa ಗುಡುಗಿದ್ದಾರೆ.

ನಗರದಲ್ಲಿ ಇಂದು ಬಿಜೆಪಿ ಪಕ್ಷದ ಚುನಾವಣಾ ಕಾರ್ಯಾಲಯಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಸಿದ್ದರಾಮಯ್ಯ Siddaramaiah ಅವರು ಎಲ್ಲೇ ಕಾರ್ಯಕ್ರಮಕ್ಕೆ ಹೋದರೂ ಆರ್ ಎಸ್ ಎಸ್ ನ್ನು  ನಿರ್ನಾಮ ಮಾಡಬೇಕು ಎಂದು ಹೇಳುತ್ತಾರೆ. ಆರ್ ಎಸ್ಎಸ್ ಪ್ರಜಾಪ್ರಭುತ್ವವನ್ನು ಉಳಿಸಿದೆ. ಎಲ್ಲಾ ಹಿಂದುಳಿದವರಿಗೆ ದಲಿತರಿಗೆ ನ್ಯಾಯ ಸಿಗುವಂತೆ ಮಾಡಿದೆ. ಹೀಗಾಗಿ ಸಿದ್ದರಾಮಯ್ಯನವರು ಆರ್‌ಎಸ್‌ ಎಸ್ ಅನ್ನು ಟೀಕೆ ಮಾಡುವುದನ್ನು ಬಿಡದಿದ್ದರೆ ಅವರು ನಿರ್ನಾಮವಾಗುತ್ತಾರೆ. ಪಕ್ಷವು ನಿರ್ನಾಮವಾಗುತ್ತೆ ನಿರ್ಮಾಣವಾಗುತ್ತೆ ಎಂದು ಹೇಳಿದರು.

ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಕೇಂದ್ರೀಯ ನಾಯಕರು ಬಂದರೆ ಕಾಂಗ್ರೆಸ್ ನವರು ಟೀಕೆ ಮಾಡ್ತಾರೆ. ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ,  ಪಕ್ಷದ ರಾಷ್ಟ್ರೀಯ ಅಧ್ಯಕ್ಷ  ಜೆ.ಪಿ. ನಡ್ಡಾ ರವರು, ಅಮಿತ್ ಶಾ ರವರು ಬಂದು ಹೋಗುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕೇಂದ್ರ ನಾಯಕರು ರಾಜ್ಯಕ್ಕೆ ಬರುತ್ತಿರುವುದರಿಂದ ಕಾಂಗ್ರೆಸ್ ನವರಿಗೆ ತಳಮಳವಾಗಿದೆ. ಅದಕ್ಕೂ ಟೀಕೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ನವರು ಬೇಕಾದರೆ ರಾಹುಲ್ ಗಾಂಧಿ, Rahul Gandhi ಸೋನಿಯಾ ಗಾಂಧಿಯವರನ್ನು Sonia Gandhi ಕರೆಸಲಿ. ರಾಹುಲ್ ಗಾಂಧಿಯವರ ಮುಖ ತೋರಿಸಿ ಮತ ಪಡೆದುಕೊಳ್ಳಲಿ. ನಮ್ಮದೇನು ಅಭ್ಯಂತರವಿಲ್ಲ. ರಾಹುಲ್ ಗಾಂಧಿ ರಾಜ್ಯಕ್ಕೆ ಬರ್ತಾರೆ ಅಂತ ಹೇಳುತ್ತಲೇ ಕೋಲಾರದ ಕಾರ್ಯಕ್ರಮವನ್ನು ಮೂರು ಬಾರಿ ಮುಂದೂಡಿದ್ದೀರಿ. ನಿಮಗೆ ನಾಯಕರುಗಳಿಲ್ಲ. ವಿಶ್ವ ಮೆಚ್ಚಿರುವಂತಹ ನಾಯಕರುಗಳು ಬಿಜೆಪಿಯಲಿದ್ದಾರೆ. ಅದಕ್ಕೋಸ್ಕರ ಅವರನ್ನು ರಾಜ್ಯಕ್ಕೆ ಕರೆಸುತ್ತಿದ್ದೇವೆ. ವಿಶ್ವದ ನಾಯಕರಾಗಿರುವ ನರೇಂದ್ರ ಮೋದಿಯವರು ನಮ್ಮ ಹೆಮ್ಮೆ ಎಂದರು.

ಬಿಜೆಪಿಗೆ ಚುನಾವಣೆಯಲ್ಲಿ ಒಳ್ಳೆಯ ವಾತಾವರಣವಿದೆ  ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿಯವರು ಜಾರಿಗೆ ತಂದ ಕೇಂದ್ರದ ಯೋಜನೆಗಳಿಂದಾಗಿ ಬಿಜೆಪಿಗೆ ಚುನಾವಣೆಯಲ್ಲಿ ಪೂರ್ಣ ಬಹುಮತ ಸಿಗಲಿದೆ ಎಂದರು.

Also read: ಕೇಂದ್ರ ಮೀಸಲು ಪಡೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡ ನಿರ್ಲಕ್ಷ್ಯ ಹಿನ್ನೆಲೆ: ಹೆಚ್‌ಡಿಕೆ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರಿಗೆ ಬಂಡೀಪುರದಲ್ಲಿ  ಹುಲಿ ಕಂಡಿದ್ದರೂ, ಕಾಣದಿದ್ದರೂ ಕಾಂಗ್ರೆಸ್ ನವರು ಟೀಕೆ ಮಾಡುತ್ತಾರೆ. ಒಂದು ಹುಲಿ ಕಂಡರೂ, ಕೇವಲ ಒಂದೇ ಹುಲಿನಾ ಅಂತ ಕೂಡ ಕಾಂಗ್ರೆಸ್ ನವರು ಪ್ರಶ್ನೆ ಮಾಡುತ್ತಾರೆ. ಟೀಕೆಯಲ್ಲಿಯೇ ಅವರು ಜೀವನ ಕಳೆದುಕೊಂಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಇನ್ನು ಮುಂದೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ಬರುವ ಯಾವುದೇ ಪ್ರಶ್ನೆ ಉದ್ಭವವಾಗುವುದಿಲ್ಲ. ಹುಲಿ ಬರಲಿಲ್ಲ ಎನ್ನುವುದಕ್ಕಿಂತಲೂ ಮೋದಿಯೇ ದೊಡ್ಡ ಹುಲಿ. ಅವರು ಇಡೀ ಪ್ರಪಂಚದ ಹುಲಿ. ಅಂತ ಹುಲಿಯ ನೇತೃತ್ವ ಸಿಕ್ಕಿರುವುದು ನಮ್ಮ ಪುಣ್ಯ ಎಂದರು.

Kalahamsa Infotech private limited

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿಯಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ಈ ಬಗ್ಗೆ ಕೋರ್ ಕಮಿಟಿ ಸಭೆಗೆ ಪ್ರತಿ ಕ್ಷೇತ್ರದಿಂದ 3 ಅಭ್ಯರ್ಥಿಗಳ ಹೆಸರನ್ನು ಕಳಿಸಿಕೊಡಲಾಗಿದೆ. ನೆನ್ನೆ ಮೊನ್ನೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದೆ. ನಮ್ಮ ರಾಜ್ಯದ ನಾಯಕರಾದ ಬಿಎಸ್ ಯಡಿಯೂರಪ್ಪನವರು ಇಂದು ಸಂಜೆ 170 ರಿಂದ 180 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಾರೆ ಎಂದರು.

ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ನಮ್ಮ ಕಾರ್ಯಕರ್ತರ ಅಪೇಕ್ಷೆಯಂತೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತೆ.  ಕೇವಲ ಚುನಾವಣೆ ಸಂದರ್ಭದಲ್ಲಿ  ನಮ್ಮ ಕಾರ್ಯಕರ್ತರು ಕೆಲಸ ಮಾಡುವುದಿಲ್ಲ. ನಾಲ್ಕು ವರ್ಷ ಪಕ್ಷವನ್ನು ಸಂಘಟಿಸುವುದು ಸಮಾಜ ಸೇವೆಯಂತ ಜನಪರ ಕೆಲಸಗಳನ್ನು ಮಾಡುತ್ತಾರೆ ಎಂದರು.

ಯಾರೇ ಕಚೇರಿ ಮಾಡಿದರೂ  ನಮ್ಮದೇನು ತಕಾರವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲದಕ್ಕೂ ಅವಕಾಶವಿದೆ.

ಎಂದು ತಮ್ಮದೇ ಪಕ್ಷದ ಮುಖಂಡ ಆಯನೂರು ಮಂಜುನಾಥ್ ಕಚೇರಿ ತೆರೆದಿರುವುದಕ್ಕೆ ಈಶ್ವರಪ್ಪ ಪ್ರತಿಕ್ರಿಯೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: K S EshwarappaKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaRahul GandhiRSSShimogaShivamoggaNewsSonia Gandhiಆರ್ ಎಸ್ ಎಸ್ಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿರಾಹುಲ್ ಗಾಂಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿದ್ದರಾಮಯ್ಯ Siddaramaiahಸೋನಿಯಾ ಗಾಂಧಿ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೇಂದ್ರ ಮೀಸಲು ಪಡೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡ ನಿರ್ಲಕ್ಷ್ಯ ಹಿನ್ನೆಲೆ: ಹೆಚ್‌ಡಿಕೆ ಆಕ್ರೋಶ

Next Post

ನೂರು ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು: ಒಬ್ಬರ ಸಾವು, ಐವರು ಪಾರು

kalpa News

kalpa News

Next Post
ನೂರು ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು: ಒಬ್ಬರ ಸಾವು, ಐವರು ಪಾರು

ನೂರು ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು: ಒಬ್ಬರ ಸಾವು, ಐವರು ಪಾರು

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL