ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ, 250ಗ್ರಾಂ ಒಣ ಗಾಂಜಾ ವಶಪಡಿಸಿಕೊಂಡಿರುವ ಘಟನೆ ತುಂಗಾ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೈಫುಲ್ಲಾ (25) ಗೌಸ್ ಫೀರ್ (36) ಬಂಧಿತ ಆರೋಪಿಗಳಾಗಿದ್ದು, ಇವರು ನಗರದ ಕಾಮತ್ ಲೇಔಟ್ನ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪಿಎಸ್ ರಾಜು ರೆಡ್ಡಿ ಬೆನ್ನೂರು ಹಾಗೂ ಡಿಸಿಆರ್ಬಿ ಉಪಾಧಿಕ್ಷಕ ಪ್ರಭು ಅವರ ನೇತೃತ್ವದಲ್ಲಿ ದಾಳಿ ನಡೆಸಿ ಅಂದಾಜು 10,000ರೂ. ಮೌಲ್ಯದ ಒಣಗಾಂಜಾ, 380ರೂ ನಗದು ಸೇರಿದಂತೆ ಒಂದು ದ್ವಿಚಕ್ರವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Also read: ವೇರಿಕೋಸ್ ವೇನ್ಸ್ ಮುಕ್ತ ಸಮಾಜ ನಿರ್ಮಾಣ ನನ್ನ ಗುರಿ: ಡಾ ಎಂ. ವಿ. ಉರಾಳ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post