ಅಖಿಲ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ಮಹಿಳಾ ಘಟಕದ ವತಿಯಿಂದ ನ.21ರ ಬೆಳಿಗ್ಗೆ 10:30ಕ್ಕೆ ಶ್ರೀ ಆದಿಚುಂಚನಗಿರಿ ಸಭಾಭವನದಲ್ಲಿ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಡಾ. ಶಾಂತಾ ಸುರೇಂದ್ರ ತಿಳಿಸಿದರು.
10 ಮಹಿಳೆಯರನ್ನು ಒಳಗೊಂಡ ಒಂದು ಗುಂಪಿನಂತೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಪ್ರಥಮ, ದ್ವಿತೀಯ, ತೃತೀಯ ವಿಜೇತ ಗುಂಪುಗಳಿಗೆ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಸಮಾಧಾನಕರ ಗುಂಪಿಗೆ ಬಹುಮಾನವಾಗಿ ಪ್ರಮಾಣ ಪತ್ರ ನೀಡಲಾಗುವುದು ಎಂದರು.
Also read: ರಾಣೆಬೆನ್ನೂರು-ಬೈಂದೂರು ಹೆದ್ದಾರಿ ಕಾಮಗಾರಿ ನಿಗದಿತ ಅವಧಿಯಲ್ಲಿ ಮುಗಿಸಿ: ಸಂಸದ ರಾಘವೇಂದ್ರ ಸೂಚನೆ
ಸ್ಪರ್ಧೆಯಲ್ಲಿ ಭಾಗವಹಿಸುವವರು ಹಾಗೂ ಹೆಚ್ಚಿನ ಮಾಹಿತಿಗಾಗಿ 9448024926, 9845948118 ಅಥವಾ 9448105901ರಲ್ಲಿ ಸಂಪರ್ಕಿಸಬಹುದಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷೆ ಪ್ರತಿಮಾ ಡಾಕಪ್ಪ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಮತಾ ಶಿವಣ್ಣ, ಸಹ ಕಾರ್ಯದರ್ಶಿ ಗಾಯತ್ರಿ ಯಲ್ಲಪ್ಪ ಗೌಡ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಹೆಚ್.ಕೆ. ರಘುರಾಜ್, ಯಲ್ಲಪ್ಪ ಗೌಡ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post