ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸರ್ಕಾರಿ ಬಸ್ ಗಳ ನಿಲುಗಡೆ ಮಾಡುತ್ತಿಲ್ಲ ಎಂದು ಬಸ್ ತಡೆದು ಪ್ರತಿಭಟನೆ ನಡೆಸಿರುವ ಘಟನೆ ಶಿವಮೊಗ್ಗ ಹೊರವಲಯದ ಮಲವಗೊಪ್ಪ ಬಳಿ ಸ್ಥಳೀಯರು ಇಂದು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಶಿವಮೊಗ್ಗ ಹೊರವಲಯದ ಮಲವಗೊಪ್ಪ, ನಿದಿಗೆ ಹಾಗೂ ಸಕ್ಕರೆ ಕಾರ್ಖಾನೆ ಸ್ಟಾಪ್ ಬಳಿ ಯಾವುದೇ ಸರ್ಕಾರಿ ಬಸ್ ಗಳನ್ನು ನಿಲ್ಲಿಸುತ್ತಿಲ್ಲ. ಇದರಿಂದಾಗಿ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳ ಜೊತೆಗೆ ಕೆಲಸ- ಕಾರ್ಯಗಳಿಗೆ ತೆರಳುವ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಶಿವಮೊಗ್ಗ – ಭದ್ರಾವತಿ ನಗರದ ಮಧ್ಯೆ ಸಂಚರಿಸುವ ಸರ್ಕಾರಿ ಬಸ್ ಗಳು ಭದ್ರಾವತಿಯಲ್ಲಿಯೇ ಭರ್ತಿಯಾಗುತ್ತಿದ್ದು, ಮಲವಗೊಪ್ಪ, ನಿದಿಗೆ ಭಾಗದ ಜನರಿಗೆ ಸಮಸ್ಯೆಯಾಗುತ್ತಿದೆ. ಕೆಲವೊಮ್ಮೆ ಬಸ್ ನಿಲ್ಲಿಸಿದರೂ ಕೂಡ ಬಸ್ ಭರ್ತಿಯಾದ ಕಾರಣಕ್ಕೆ ವಿದ್ಯಾರ್ಥಿಗಳು ಬಸ್ ನ ಡೋರ್ ಬಳಿ ನಿಂತು ಹೋಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಶಶಿಕುಮಾರ್, ಸಂತೋಷ್, ಗಿರೀಶ್, ಸತೀಶ್ ಹಾಗೂ ಮಲವಗೊಪ್ಪ ಭಾಗದ ವಿದ್ಯಾರ್ಥಿಗಳು & ಗ್ರಾಮಸ್ಥರು ಭಾಗಿಯಾಗಿದ್ದರು.










Discussion about this post