ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಾಂಧಿ ಬಜಾರ್ ವರ್ತಕರಿಗೆ ಫುಟ್‌ಪಾತ್ ವ್ಯಾಪಾರದಿಂದ ಆಗುತ್ತಿರುವ ತೊಂದರೆ ತಪ್ಪಿಸಲು ಎರಡು ಕಡೆಗಳಲ್ಲಿ ಫುಟ್‌ಪಾತ್ ತೆರವುಗೊಳಿಸುವಂತೆ ಆಗ್ರಹಿಸಿ ಗಾಂಧಿ ಬಜಾರ್ #Gandhi Bazar ವರ್ತಕರ ಸಂಘ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.
ಪುಟ್‌ಪಾತ್ ವ್ಯಾಪಾರಿಗಳು, ತಳ್ಳುವ ಗಾಡಿಗಳು ಮತ್ತು ಫ್ಲೆಕ್ಸ್ಗಳಿಂದ ತೆರಿಗೆ ಕಟ್ಟುತ್ತಿರುವ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿದ್ದು, ಗಾಂಧಿಬಜಾರಿನ ಎರಡು ಕಡೆ ಪುಟ್ ಪಾತ್ ಗಳಲ್ಲಿ ವ್ಯಾಪಾರಿಗಳು, ರಸ್ತೆಯ ಮೇಲೆ ತಳ್ಳುವ ಗಾಡಿ ಹಾವಳಿ ಹೆಚ್ಚಾಗಿದೆ. ಎಲ್ಲ ಅಂಗಡಿಯವರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ. ಗ್ರಾಹಕರು ಅಂಗಡಿ ಒಳಗೆ ಬರಲು ಅಡ್ಡಿಯಾಗುತ್ತಿದೆ. ರಸ್ತೆ ಮೇಲೆ ದ್ವಿಚಕ್ರ ವಾಹನ ಚಲಿಸುವುದು ದುಸ್ತರವಾಗಿದೆ. ಪಾದಚಾರಿಗಳು ಪುಟ್ ಪಾತ್ ಬಿಟ್ಟು ರಸ್ತೆಯಲ್ಲಿ ಓಡಾಡುವಂತಾಗಿದೆ ಎಂದು ತಿಳಿಸಿದರು.

Also read: ಸಕಲ ಸರ್ಕಾರಿ ಗೌರವದೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ: ಸಿಎಂ ಏಕನಾಥ ಶಿಂಧೆ
ಶಿವಪ್ಪನಾಯಕ ವೃತ್ತದಿಂದ ರಾಮಣ್ಣ ಶ್ರೇಷ್ಟಿ ಪಾರ್ಕ್ವರೆಗೆ ಎರಡು ಬದಿಯಲ್ಲಿ ಪುಟ್ ಪಾತ್ ವ್ಯಾಪಾರಿಗಳನ್ನು ಶಾಶ್ವತವಾಗಿ ನಿರ್ಬಂಧಿಸುವುದು. ರಸ್ತೆಯ ಮೇಲೆ ತಳ್ಳುವ ಗಾಡಿ ನಿಲ್ಲಿಸುವುದನ್ನು ಶಾಶ್ವತವಾಗಿ ನಿರ್ಬಂಧಿಸುವುದು. ಶಿವಪ್ಪನಾಯಕ ಪ್ರತಿಮೆ ವೃತ್ತದಲ್ಲಿ ಫ್ಲೆಕ್ಸ್ ಬೋರ್ಡ್ಗಳನ್ನು ಹಾಕುವುದನ್ನು ಶಾಶ್ವತವಾಗಿ ನಿರ್ಬಂದಿಸುವುದು. ಹೆಚ್ಚುವರಿ ಟ್ರಾಫಿಕ್ ಸಿಬ್ಬಂದಿ ನೇಮಿಸುವುದು. ಪ್ರತಿ ಮಂಗಳವಾರ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಸಂತೆಯಿಂದ ಅಂಗಡಿಯವರು ಹಾಗೂ ನಿವಾಸಿಗಳಿಗೆ ಆಗುತ್ತಿರುವ ತೊಂದರೆ ಬಗ್ಗೆ ಗಮನ ಹರಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಗಾಂಧಿ ಬಜಾರ್ ವರ್ತಕರ ಸಂಘದ ಅಧ್ಯಕ್ಷ ವಿಜಯಕುಮಾರ್ ಜೆ.ದಿನಕರ್, ಕಾರ್ಯದರ್ಶಿ ರಾಕೇಶ್ ಸಾಕ್ರೆ, ಪದಾಧಿಕಾರಿಗಳು, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ಪದಾಧಿಕಾರಿಗಳು, ವರ್ತಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















Discussion about this post