ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಬೆಂಗಳೂರು |
ಬೆಂಗಳೂರು ಸಂಚಾರ ದಟ್ಟಣೆ ಕಡಿಮೆಗೊಳಿಸಲು 17 ಸಾವಿರ ಕೋಟಿ ವೆಚ್ಚದ ರಿಂಗ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ Central Minister Nitin Gadkari ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಈ ರಿಂಗ್ ರಸ್ತೆ ನಿರ್ಮಾಣದಿಂದಾಗಿ, ಸಾರಿಗೆ ಸಮಸ್ಯೆ ನಿವಾರಣೆ ಜತೆಗೆ ರಾಜ್ಯದ ಜನರಿಗೆ ಅನುಕೂಲವಾಗಲಿದೆ. ಜನವರಿ 2025 ರ ವೇಳೆಗೆ ಆರು ಪ್ಯಾಕೆಜ್ ಗಳ ರಿಂಗ್ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದರು.

Also read: ಫೆ.26: ಸಂಸ್ಕೃತ ಬೋರ್ಡ್ ರಾರಾಜಿಸುವ 554 ಅಮೃತ್ ಭಾರತ್ ರೈಲು ನಿಲ್ದಾಣಕ್ಕೆ ಪ್ರಧಾನಿ ಶಂಕುಸ್ಥಾಪನೆ
ಲೋಕೋಪಯೋಗಿ ಇಲಾಖೆ ಕಳಿಸಿದ 17 ಪ್ರಮುಖ ಯೋಜನೆಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ. ಆದಷ್ಟು ಬೇಗನೇ ಇವುಗಳಿಗೆ ಅಗತ್ಯ ಮಂಜೂರಾತಿ ನೀಡಲಾಗುವುದು.
ಸಿಆರ್’ಎಫ್ ಅಡಿ 2000 ಕೋಟಿ ವೆಚ್ಚದ ಕಾಮಗಾರಿಗಳನ್ನು ಕರ್ನಾಟಕ ರಾಜ್ಯಕ್ಕೆ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ ಅವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಹೆದ್ದಾರಿ ಜಾಲವನ್ನು ಜೋಡಿಸುವ ಮೂಲಕ ಒಟ್ಟಾರೆ ಪ್ರಯಾಣದ ಅವಧಿಯನ್ನು ಕಡಿಮೆಗೊಳಿಸುವುದರ ಜತೆಗೆ ಅಭಿವೃದ್ಧಿಗೆ ಪೂರಕವಾದ ವಾತಾವರಣ ಲಭಿಸಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಪೆಟ್ರೋಲ್, ಡೀಸೆಲ್ ಬೆಲೆಗೆ ಹೋಲಿಸಿದರೆ ಎಥೆನಾಲ್ ಕಡಿಮೆ ದರದಲ್ಲಿ ದೊರಕುತ್ತದೆ. ಎಥೆನಾಲ್, ಗ್ರೀನ್ ಹೈಡ್ರೋಜನ್, ಎಲೆಕ್ಟಿçಕಲ್ ವಾಹನಗಳು ಸೇರಿದಂತೆ ಜೈವಿಕ ಇಂಧನ ನಮ್ಮ ಮುಂದಿನ ಭವಿಷ್ಯವಾಗಿದೆ. ಜಿಲ್ಲೆಯಲ್ಲಿ ಎಥೆನಾಲ್ ಉತ್ಪಾದನೆ ಹಾಗೂ ಬಳಕೆಗೆ ಹೆಚ್ಚು ಅವಕಾಶಗಳಿವೆ. ಸಕ್ಕರೆ ಕಾರ್ಖಾನೆಗಳಿವೆ ಇದರಿಂದ ಸಹ ಉತ್ಪಾದಿಸಬಹುದು. ಎಥೆನಾಲ್ ನಿಂದ ವಿಮಾನ ಇಂಧನ ಸಹ ತಯಾರಾಗುತ್ತಿದ್ದು ರೈತರ ಅಭಿವೃದ್ಧಿ ಮತ್ತು ಪರಿಸರ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಎಥೆನಾಲ್ ಬಳಕೆಗೆ ರಾಜ್ಯ ಸರಕಾರ ಪ್ರೋತ್ಸಾಹ ನೀಡಬೇಕು ಎಂದ ಅವರು ರಾಜ್ಯ ಜೈವಿಕ ಇಂಧನ ಉತ್ಪಾದಕ ಹಬ್ ಆಗಬಹುದು ಎಂದರು.
ಮುಂಬರುವ ದಿನಗಳಲ್ಲಿ ಜಗತ್ತಿಗೆ ಎಥೆನಾಲ್ ರಫ್ತುಗೊಳಿಸುವ ಗುರಿಯನ್ನು ಹೊಂದಲಾಗಿದೆ. ಭವಿಷ್ಯದಲ್ಲಿ ಎಥೆನಾಲ್ ಹಾಗೂ ಮಿಥೆನಾಲ್ ಆಧಾರಿತ ವಾಹನಗಳನ್ನು ರಸ್ತೆಗಿಳಿಸುವ ಮೂಲಕ ಪರಿಸರ ರಕ್ಷಣೆ ಜತೆಗೆ ರೈತರ ಆರ್ಥಿಕಾಭಿವೃದ್ಧಿಗೂ ಅವಕಾಶ ಕಲ್ಪಿಸಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post