ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಬೆಂಗಳೂರು |
ಸಿಇಟಿ ಪರೀಕ್ಷೆ #CET Exam ವೇಳೆ ಶಿವಮೊಗ್ಗದಲ್ಲಿ ಬ್ರಾಹ್ಮಣ ವಿದ್ಯಾರ್ಥಿ ಜನಿವಾರ #Janiwara ತೆಗೆಸಿದ ಪ್ರಕರಣಕ್ಕೆ ಕಾರಣಕರ್ತ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ #Minister Madhu Bangarappa ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಶಿವಮೊಗ್ಗ ನಗರದ ಕಾಲೇಜೊಂದರಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಕರ್ನಾಟಕದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಧ್ಯಮಗಳ ಮೂಲಕ ವಿಚಾರ ತಿಳಿದುಕೊಂಡಿದ್ದೇವೆ. ಈ ಬಗ್ಗೆ ನಿರ್ದೇಶನ ಕೊಡುವ ಅಧಿಕಾರ ಯಾವ ಅಧಿಕಾರಿಗೂ ಇಲ್ಲ. ಈ ರೀತಿ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಈ ವಿಚಾರ ನನ್ನ ವ್ಯಾಪ್ತಿಗೆ ಬರುವುದಿಲ್ಲ, ಹಾಗಾಗಿ ಸಂಬಂಧಪಟ್ಟ ಇಲಾಖೆ ಜತೆ ಚರ್ಚಿಸುವೆ. ಈ ಘಟನೆ ನನ್ನ ಜಿಲ್ಲೆಯಲ್ಲಿ ಆಗಿರುವುದರಿಂದ ಕ್ರಮಕ್ಕೆ ಸೂಚನೆ ನೀಡುತ್ತೇವೆ. ವಿದ್ಯಾರ್ಥಿಗಳ ವಿಚಾರದಲ್ಲಿ ಈ ರೀತಿ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಜನಿವಾರ ತೆಗೆಸಿದ್ದು ಅದು ಅತಿರೇಕದ ವರ್ತನೆ: ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್
ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಕೇಂದ್ರದಲ್ಲಿ ಆ ರೀತಿ ಆಗಿದ್ದರೆ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ #Minister M C Sudhakar ಅವರು ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಎಲ್ಲಾ ಜಾತಿ, ಧರ್ಮಗಳ ಆಚರಣೆ ಸಂಪ್ರದಾಯಕ್ಕೆ ಗೌರವ ಕೊಡಬೇಕು. ನಾನು ಈ ರೀತಿಯ ಘಟನೆಗಳಿಗೆಲ್ಲ ಪ್ರೋತ್ಸಾಹ ಕೊಡುವುದಿಲ್ಲ. ಘಟನೆ ಸಂಬಂಧ ಅಧಿಕಾರಿಗಳ ಬಳಿ ವರದಿ ಪಡೆದು, ಮುಂದೆ ಏನು ಮಾಡಬಹುದು ಎಂದು ಯೋಚಿಸುತ್ತೇನೆ. ಆ ರೀತಿ ಆಗಿದ್ದು ಸತ್ಯವೇ ಆದರೆ ಇನ್ನೊಮ್ಮೆ ಪರಿಶೀಲನೆ ಮಾಡುತ್ತೇನೆ. ಆಯ್ದ ವಿಚಾರ ಎತ್ತಿಕೊಂಡು ರಾಜಕೀಯ ಲಾಭ ಮಾಡುವುದಲ್ಲ. ಯಾವುದೇ ಸಮುದಾಯವನ್ನು ನೋವಿಸುವ ಉದ್ದೇಶ ನಮ್ಮದಲ್ಲ ಎಂದು ಸುಧಾಕರ್ ಬೆಂಗಳೂರಿನಲ್ಲಿ ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post